ಪಾಕಿಸ್ತಾನ: ಖ್ಯಾತ ಇಸ್ಲಾಮಿಕ್ ವಿದ್ವಾಂಸ ಮೌಲಾನಾ ತಾರಿಕ್ ಜಮೀಲ್ ಅವರ ಪುತ್ರ ಆಸಿಮ್ ಜಮೀಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮೌಲಾನಾ ಮಾಹಿತಿ ನೀಡಿದ್ದಾರೆ, ತನ್ನ ಮಗ ಆಸೀಮ್ ಜಮೀಲ್ ಇಂದು ತಲಂಬಾದಲ್ಲಿ ಮೃತಪಟ್ಟಿದ್ದಾನೆ. ಈ ಹಠಾತ್ ಸಾವಿನ ಶಾಕ್ನಿಂದ ನಮಗೆ ಹೊರಬರಲಾಗುತ್ತಿಲ್ಲ ಎಂದು ಬರೆದುಕೊಂಡಿದ್ದಾರೆ.
ತಲಂಬಾದಲ್ಲಿರುವ ತಮ್ಮ ತೋಟದ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಎದೆಗೆ ಗುಂಡು ತಗುಲಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಪೊಲೀಸರು ಮತ್ತು ಫೋರೆನ್ಸಿಕ್ ತಂಡವು ಪ್ರಕರಣದ ತನಿಖೆ ನಡೆಸುತ್ತಿದ್ದು, ಸಾವಿನ ಕಾರಣದ ಬಗ್ಗೆ ಇನ್ನೂ ಏನೂ ಸ್ಪಷ್ಟಪಡಿಸಲಾಗಿಲ್ಲ. ಆಸಿಮ್ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದರು, ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಪುತ್ರ ಆಸೀಮ್ ಫಾರ್ಮ್‌ಹೌಸ್‌ನಲ್ಲಿರುವ ಜಿಮ್‌ನಲ್ಲಿ ವ್ಯಾಯಾಮ ಮಾಡುತ್ತಿದ್ದರು, ಸಿಬ್ಬಂದಿಯೊಬ್ಬರು ಅವರ ಸುರಕ್ಷತೆಗಾಗಿ ಅಲ್ಲೇ ಇದ್ದರು. ಆದರೆ ಆಸೀಮ್ ಸಿಬ್ಬಂದಿಯಿಂದ ಪಿಸ್ತೂಲ್ ತೆಗೆದುಕೊಂಡು ಎದೆಗೆ ಗುಂಡು ಹಾರಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.