
ಉಜಿರೆ : ಅಪ್ಪ ಮತ್ತು ಮಗನ ನಡುವೆ ನಡೆದ ಗಲಾಟೆ ಅಪ್ಪ ಮಗನನ್ನು ಚೂರಿ ಇರಿದು ಕೊಲೆ ಮಾಡಿದ ಘಟನೆ ಉಜಿರೆಯಲ್ಲಿ ನಿನ್ನೆ ರಾತ್ರಿ ನಡೆದಿದೆ. ಮೃತರನ್ನು ಉಜಿರೆ ಗ್ರಾಮದ ಕೊಡೆಕಲ್ಲು ನಿವಾಸಿ ಕೃಷ್ಣಯ್ಯ ಆಚಾರ್(75) ಅವರ ಪುತ್ರ ಜಗದೀಶ್(30) ಎಂದು ಗುರುತಿಸಲಾಗಿದ್ದು,ಕೊಲೆ ಮಾಡಿದ ಆರೋಪಿ ಕಷ್ಣಯ್ಯ ಆಚಾರ್.



ಯಾವುದೋ ವಿಚಾರಕ್ಕೆ ತಂದೆ-ಮಗನ ನಡುವೆ ಜಗಳ ನಡೆದಿದ್ದು, ಈ ಜಗಳ ವಿಕೋಪಕ್ಕೆ ತೆರಳಿ ಕೃಷ್ಣಯ್ಯ ಆಚಾರ್ ಮನೆಯ ಕೋಣೆಯೊಳಗೆ ಹೋಗಿ ಚಿಲಕ ಹಾಕಿದ್ದಾರೆ ಮಗ ಜಗದೀಶ ಕಾಲಿನಿಂದ ತುಳಿದು ಬಾಗಿಲು ತೆಗೆಯಲು ಪ್ರಯತ್ನಿಸಿದ್ದಾನೆ. ಇದರಿಂದ ಸಿಟ್ಟಿಗೆದ್ದ ಕೃಷ್ಣಯ್ಯ ಆಚಾರ್ ಅಲ್ಲೇ ಕಪಾಟಿನಲ್ಲಿದ್ದ ಚೂರಿಯನ್ನು ತೆಗೆದು ಹೊರಬಂದು ಜಗದೀಶನಿಗೆ ಎಡ ಭುಜಕ್ಕೆ ಹಾಗೂ ಎಡ ಎದೆ ಭಾಗಕ್ಕೆ ಚೂರಿಯಿಂದ ಇರಿದಿದ್ದಾರೆ. ಇರಿತಕ್ಕೆ ಒಳಗಾಗಿ ಕುಸಿದು ಬಿದ್ದು ಜಗದೀಶ್ ಮೃತಪಟ್ಟಿದ್ದಾರೆನ್ನಲಾಗಿದೆ.
ಈ ಬಗ್ಗೆ ಜಗದೀಶನ ಅಣ್ಣ ಗಣೇಶ್ ನೀಡಿರುವ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.