Visitors have accessed this post 529 times.
ಹಾವೇರಿಯಲ್ಲಿ ಮದುವೆ ದಿಬ್ಬಣದ ಮಿನಿ ಬಸ್ ಪಲ್ಟಿಯಾಗಿ 30 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿ ನಾಲ್ವರ ಸ್ಥಿತಿ ಗಂಭೀರವಾದ ಘಟನೆ ನಡೆದಿದೆ.
ಹಾವೇರಿ ತಾಲೂಕಿನ ದೇವಗಿರಿ ಗ್ರಾಮದ ಎಂಜಿನಿಯರಿಂಗ್ ಕಾಲೇಜು ಬಳಿ ಈ ಘಟನೆ ನಡೆದಿದೆ. ಕರ್ಜಗಿ ಗ್ರಾಮದಲ್ಲಿ ನಡೆದ ಮದುವೆ ಮುಗಿಸಿಕೊಂಡು ವಾಪಸ್ ಊರಿಗೆ ಹೋಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ದೇವಗಿರಿ ಗ್ರಾಮದ ಬಳಿ ಮಿನಿ ಬಸ್ ಉರುಳಿ ಬಿದ್ದಿದೆ.
ಗಾಯಗೊಂಡವರನ್ನುಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಕೆಲವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.