November 9, 2025
WhatsApp Image 2023-11-01 at 10.18.53 AM

ಮಂಗಳೂರು:  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ನವೆಂಬರ್ 01 ರ ಬುಧವಾರ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.

ನವೆಂಬರ್ 1 ರ ಬುಧವಾರ ಬೆಳಿಗ್ಗೆ 8.15ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. 9 ಗಂಟೆಗೆ 68ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ ಅಂಗವಾಗಿ ನಗರದ ನೆಹರು ಮೈದಾನದಲ್ಲಿ ಜಿಲ್ಲಾಡಳಿತ ಆಯೋಜಿಸಿರುವ ಕನ್ನಡ ದ್ವಜಾರೋಹಣ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. 12 ಗಂಟೆಗೆ ನಗರದ ಲೇಡಿಹಿಲ್‍ನಲ್ಲಿರುವ ಪತ್ರಿಕಾ ಭವನದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್ ಕ್ಲಬ್ ಮತ್ತು ಪತ್ರಿಕಾ ಭವನ ಟ್ರಸ್ಟ್ ಸಹಭಾಗಿತ್ವದಲ್ಲಿ 50ನೇ ಉಚಿತ ವೈದ್ಯಕೀಯ ತಪಾಸಣೆಯ ಶಿಬಿರ ಆರೋಗ್ಯ ಸಂಭ್ರಮ ಕಾರ್ಯಕ್ರಮದ ಉದ್ಘಾಟನೆ ಹಾಗೂ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಭಾಗಿಯಾಗುವರು.

ಮಧ್ಯಾಹ್ನ 2.30 ಕ್ಕೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳೂರು ಸ್ಮಾರ್ಟ್ ಸಿಟಿ ಪ್ರಗತಿ, ಅಂತ ರಾಷ್ಟ್ರೀಯ ಈಜುಕೊಳ, ಕರಾವಳಿ ಉತ್ಸವದ ಬಗ್ಗೆ ಪೂರ್ವಭಾವಿ ಸಭೆ ನಡೆಸುವರು. ಸಂಜೆ 4.30 ಕ್ಕೆ ನಗರದ ಪುರಭವನದಲ್ಲಿ 68ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಮಂಗಳೂರು ಸಿಟಿ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಲಾಗಿರುವ “ಲೆಟಸ್ ವಾಕ್ ಟುಗೆದರ್ ಫಾರ್ ಡ್ರಗ್ ಫ್ರೀ ಫ್ಯೂಚರ್” ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಸಂಜೆ 6.40 ಕ್ಕೆ ಮಂಗಳೂರಿನಿಂದ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Leave a Reply