

ಮಂಗಳೂರು: ನಗರದ ಕದ್ರಿ ಕಂಬಳದಲ್ಲಿರುವ ಅಪಾರ್ಟ್‌ಮೆಂಟ್‌ವೊಂದರ ಫೆಸಿಲಿಟಿ ಮ್ಯಾನೇಜರ್, ಬಂಟ್ವಾಳ ನಿವಾಸಿ ಹರೀಶ್ ಕುಮಾರ್ (38) ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹರೀಶ್ ಕುಮಾರ್ ಅವರ ಮೃತದೇಹ ಅಪಾರ್ಟ್‌ಮೆಂಟ್‌ನ ಅವರ ಕೊಠಡಿಯಲ್ಲಿ ಪತ್ತೆಯಾಗಿದೆ. ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ. ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.






