ಉಡುಪಿ: ಟ್ಯಾಂಕರ್ ಮೈಮೇಲೆ ಹರಿದು ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಪಡುಬಿದ್ರಿ ಪೇಟೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶುಕ್ರವಾರ ಸಂಜೆ ನಡೆದಿದೆ.
ಮೃತ ಯುವಕನನ್ನು ಕಂಚಿನಡ್ಕ ನಿವಾಸಿ ಪ್ರಜ್ವಲ್ ಎಂದು ಗುರುತಿಸಲಾಗಿದೆ. ಪಡುಬಿದ್ರಿ ಪೇಟೆಯಲ್ಲಿ ಮಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ವೊಂದು ಪ್ರಯಾಣಿಕರನ್ನು ಇಳಿಸಲು ನಿಲ್ಲಿಸಿತ್ತು. ಈ ವೇಳೆ ಹಿಂದಿನಿಂದ ಪ್ರಜ್ವಲ್ ಸವಾರಿ ಮಾಡಿಕೊಂಡು ಬರುತ್ತಿದ್ದ ಬೈಕ್ ಬಸ್ ಗೆ ಢಿಕ್ಕಿ ಹೊಡೆದಿದ್ದು, ಇದರ ಪರಿಣಾಮ ಪ್ರಜ್ವಲ್ ರಸ್ತೆಗೆ ಎಸೆಯಲ್ಪಟ್ಟಿದ್ದರು. ಇದೇ ವೇಳೆ ರಭಸವಾಗಿ ಬಂದ ಟ್ಯಾಂಕರ್ ವೊಂದು ಮೈಮೇಲೆ ಹರಿದ ಪರಿಣಾಮ ಪ್ರಜ್ವಲ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ