Visitors have accessed this post 403 times.
ಸುಳ್ಯ : ಸುಳ್ಯ ಪೇಟೆಯಲ್ಲಿ ಏಕಾ ಏಕಿ ಭೂಕುಸಿತವುಂಟಾದ ಘಟನೆ ನಡೆದಿದೆ.
ಸುಳ್ಯ ಪೇಟೆಯ ಪರಿವಾರಕಾನ ಉಡುಪಿ ಗಾರ್ಡನ್ ಹೋಟೆಲ್ ಬಳಿ ಭೂಕುಸಿತ ಉಂಟಾಗಿದ್ದು, ಭೂಕುಸಿತವಾದ ಸ್ಥಳದ ಪಕ್ಕದಲ್ಲೇ ವಿದ್ಯುತ್ ಟ್ರಾನ್ಸ್ ಫಾರ್ಮರ್ ಒಂದು ನೆಲಕ್ಕಪ್ಪಳಿಸಿದೆ. ಆದರೆ ವಿದ್ಯುತ್ ಕಂಬ ಬೀಳುವ ಸಂದರ್ಭ ಕರೆಂಟ್ ಇಲ್ಲದ ಕಾರಣ ಸ್ವಲ್ಪದರಲ್ಲೇ ಭಾರೀ ಅನಾಹುತವೊಂದು ತಪ್ಪಿದೆ.
ಘಟನಾ ಸ್ಥಳಕ್ಕೆ ಮೆಸ್ಕಾ ಸಿಬ್ಬಂದಿಗಳು ಆಗಮಿಸಿ ವಿದ್ಯುತ್ ಕಂಬ ತೆರವುಗೊಳಿಸಿದ್ದು, ಅಗ್ನಿಶಾಮಕ ಸಿಬ್ಬಂದಿಗಳು ಆಗಮಿಸಿ, ಭೂಕುಸಿತ ಉಂಟಾದ ಭಾಗಕ್ಕೆ ಯಾರೂ ಹೋಗದಂತೆ ತಡೆ ಮಾಡಿದ್ದಾರೆ. ಏಕಾಏಕಿ ಉಂಟಾದ ಭೂಕುಸಿತಕ್ಕೆ ಸುಳ್ಯದ ಜನರು ಬೆಚ್ಚಿಬಿದ್ದಿದ್ದಾರೆ. ಭೂ ಕುಸಿತಕ್ಕೆ ಕಾರಣ ತಿಳಿದು ಬಂದಿಲ್ಲ.