
ದಾವಣಗೆರೆ: 7 ವರ್ಷದ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗುತ್ತಿದ್ದ ಕಾಮುಕ ಶಿಕ್ಷಕನ್ನು ಬಂಧಿಸಿರುವ ಘಟನೆ ದಾವಣಗೆರೆ ನಗರದ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ.



ದಾವಣಗೆರೆ ನಗರದ ಸರ್ಕಾರಿ ಶಾಲೆಯ ಶಿಕ್ಷಕನೊಬ್ಬ ಹಲವು ದಿನಗಳಿಂದ ಬಾಲಕಿ ಮೇಲೆ ಅತ್ಯಾಚಾರವನ್ನು ನಡೆಸುತ್ತಿದ್ದ ಎನ್ನಲಾಗಿದೆ.
ಈ ನಡುವೆ ಕಳೆದ ಎರಡು ದಿನಗಳ ಹಿಂದೆ ಬಾಲಕಿ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರ ತಪಾಸಣೆ ವೇಳೆ ಆಕೆ ಮೇಲೆ ಅತ್ಯಾಚಾರವಾಗಿರುವುದು ಬೆಳಕಿಗೆ ಬಂದಿದೆ. ಪೋಷಕರ ದೂರಿನನ್ವಯ ಪೋಕ್ಸೋ ಪ್ರಕರಣದ ಅಡಿ ಕೇಸ್ ದಾಖಲಿಸಿದ ಪೊಲೀಸರು ಶಿಕ್ಷಕನನ್ನು ಬಂಧಿಸಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ಅತ್ಯಾಚಾರಕ್ಕೆ ಒಳಗಾದ ಬಾಲಕಿಗೆ ಚಿಕಿತ್ಸೆ ನೀಡಲಾಗುತ್ತಿದೆ.