
ಕಡಬ: ಗಂಡ ಮತ್ತು ಹೆಂಡತಿ ಜಗಳ ವಿಪರೀತ ಮಟ್ಟಕ್ಕೆ ತಿರುಗಿ ಜಗಳ ಹೆಂಡತಿಯ ಸಾವಿನೊಂದಿಗೆ ಅಂತ್ಯವಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುದ್ಮಾರು ಗ್ರಾಮದ ಚಾಪೆಲ್ಲ ಎಂಬಲ್ಲಿ ಶನಿವಾರ ಸಂಜೆ ನಡೆದಿದೆ.



ಕುಸುಮ(39) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಕುಸುಮ ಮತ್ತು ಆಕೆಯ ಪತಿ ಸಂಜೀವ ನಡುವೆ ಆಗಾಗ್ಗೆ ಗಲಾಟೆ ನಡೆಯುತ್ತಿತ್ತು. ಅಂತೆಯೇ ಶನಿವಾರ ಕೂಡ ಮಾತಿಗೆ ಮಾತು ಬೆಳೆದಿದೆ. ಕೋಪದ ಭರದಲ್ಲಿ ಇಬ್ಬರು ಕೂಡ ವಿಷ ಸೇವಿಸಿದ್ದಾರೆ.
ಈ ವಿಚಾರ ಸ್ಥಳೀಯರಿಗೆ ತಿಳಿದು ತಕ್ಷಣ ಅವರ ಸಂಬಂಧಿಕರಿಗೆ ವಿಚಾರವನ್ನು ತಿಳಿಸಿದ್ದಾರೆ. ಅವರು ಬಂದು ತಕ್ಷಣ ಅವರನ್ನು ಆಸ್ಪತ್ರೆಗೆ ಸೇರಿಸುವ ಪ್ರಯತ್ನದಲ್ಲಿದ್ದಾಗ ಕುಸುಮ ಸಾವನ್ನಪಿದ್ದಾರೆ. ಸಂಜೀವ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ .ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ