ಕಳೆದ ಹಲವು ತಿಂಗಳುಗಳಿಂದ ಇಸ್ರೇಲ್ ಹಾಗೂ ಹಮಾಸ್ ಬಂಡುಕೋರರ ನಡುವೆ ಯುದ್ಧ ನಡೆಯುತ್ತಿದ್ದು, ಸಾವಿರಾರು ಯುದ್ಧದಲ್ಲಿ ಅಪಾರ ಪ್ರಮಾಣದ ಸಂಖ್ಯೆಯಲ್ಲಿ ಎರಡು ಕಡೆಗಳಲ್ಲಿ ಅಮಾಯಕ ಜನರು ಸಾವನ್ನಪ್ಪಿದ್ದಾರೆ.ಅಲ್ಲದೆ ಅನೇಕ ಸೈನಿಕರು ಕೂಡ ಮರಣ ಹೊಂದಿದ್ದಾರೆ.
ಇದರ ಮಧ್ಯ ಕರ್ನಾಟಕದಲ್ಲಿ ಪ್ಯಾಲೇಸ್ಟೈನ್ ಬೆಂಬಲಿಸಿ ಅದರ ಪರವಾಗಿ ಘೋಷಣೆ ಕೂಗುವುದು ಹಾಗೂ ಭಿತ್ತಿಪತ್ರ ಪ್ರದರ್ಶಿಸುವಂತಹ ಘಟನೆಗಳು ನಡೆಯುತ್ತಿವೆ. ಅದರಂತೆ ನಿನ್ನೆ ವಿಜಯಪುರದಲ್ಲಿ ಎಸ್ ಡಿ ಪಿ ಐ ಕಾರ್ಯಕರ್ತರು ಪ್ಯಾಲೇಸ್ಟೈನ್ ಪರವಾಗಿ ಘೋಷಣೆ ಕೂಗಿ ಭಿತ್ತಿಪತ್ರವನ್ನು ಪ್ರದರ್ಶಿಸಿದರು.
ಎಸ್ಡಿಪಿಐ ಜಿಲ್ಲಾಧ್ಯಕ್ಷ ಅತಾವುಲ್ಲಾ ನೇತೃತ್ವದಲ್ಲಿ ಪ್ರತಿಭಟನೆಯಲ್ಲಿ ಪ್ಯಾಲೆಸ್ಟೈನ್ ಪರ ಭಿತ್ತಿಪತ್ರ ಪ್ರದರ್ಶನ ಮಾಡಲಾಗಿತ್ತು. ಪ್ರತಿಭಟನೆಯಲ್ಲಿ ಅಪ್ರಾಪ್ತ ಮಕ್ಕಳು ಸಹಿತ ಭಾಗಿಯಾಗಿದ್ದರು. ಇದೀಗ ಎಸ್ಡಿಪಿಐ ಜಿಲ್ಲಾಧ್ಯಕ್ಷ ಅತಾವುಲ್ಲ ವಿರುದ್ಧ ಗೋಳಗುಮ್ಮಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದೇ ಘಟನೆಗೆ ಸಂಬಂಧಿಸಿದಂತೆ ಕೆಲವು ದಿನಗಳ ಹಿಂದೆ, ಪ್ಯಾಲೆಸ್ತೀನ್ ಬೆಂಬಲಿಸಿ ವಿಡಿಯೋ ಹಂಚಿಕೊಂಡಿದ್ದ ಹೊಸಪೇಟೆಯ ಆಲಂ ಬಾಷಾ ವಿರುದ್ಧ ಸುಮುಟೋ ಪ್ರಕರಣ ದಾಖಲು ಮಾಡಲಾಗಿತ್ತು. ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯ PSI ಮುನಿರತ್ನ ನೀಡಿದ ದೂರಿನ ಆಧಾರದ ಮೇಲೆ CRPC 108-151 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಯುವಕನನ್ಮು ಪೊಲೀಸರು ವಶಕ್ಕೆ ಪಡೆದಿದ್ದರು.
ಆಲಂ ಬಾಷಾ ಹೊಸಪೇಟೆಯ ಸಿದ್ದಲಿಂಗಪ್ಪ ಚೌಕಿಯ ನಿವಾಸಿ ಆಗಿದ್ದು, ಅಲ್ಪಸಂಖ್ಯಾತ ಇಲಾಖೆ ಕಚೇರಿಯಲ್ಲಿ ಅಟೆಂಡರ್ ಕೆಲಸ ಮಾಡುತ್ತಿದ್ದ. ವಾಟ್ಸಾಪ್ ಸ್ಟೇಟಸ್ನಲ್ಲಿ ಯುದ್ಧ ಪೀಡಿತ ಪ್ಯಾಲೆಸ್ತೀನ್ ಭಾವಚಿತ್ರ ಹಾಕಿ ವಿಡಿಯೋ ಹಂಚಿಕೊಂಡಿದ್ದು, ನಾವು ಪ್ಯಾಲೆಸ್ಟೈನ್ ಪರವಾಗಿದ್ದೇವೆ. ಪ್ಯಾಲೆಸ್ಟೈನ್ ಜಿಂದಾಬಾದ್ ಅಂತ ಬರೆಯಲಾಗಿತ್ತು.