Visitors have accessed this post 1223 times.

ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್‌ ಬರ್ಬರ ಹತ್ಯೆ..!

Visitors have accessed this post 1223 times.

ಪುತ್ತೂರು ಪೇಟೆಯ ಹೊರ ವಲಯ ನೆಹರುನಗರದಲ್ಲಿ ನಿನ್ನೆ ತಡ ರಾತ್ರಿ ದುಷ್ಕರ್ಮಿಗಳ ತಂಡವೊಂದು ತಲವಾರು ನಿಂದ ಕೊಚ್ಚಿ ಯುವಕನೊರ್ವನ ಬರ್ಬರ ಹತ್ಯೆ ನಡೆಸಿದೆ. ಪುತ್ತೂರಿನ ಪ್ರಖ್ಯಾತ ಹುಲಿ ವೇಷ ಕುಣಿತ ತಂಡ ಟೈಗರ್ಸ್‌ ಕಲ್ಲೇಗ ತಂಡದ ಸಾರಥ್ಯ ವಹಿಸಿದ್ದ ಅಕ್ಷಯ್‌ ಕಲ್ಲೇಗ ಹತ್ಯೆಯಾದವರು.

ಕೆಲ ಗಂಟೆಗಳ ಮೊದಲು ಕ್ಷುಲ್ಲಕ ಕಾರಣವೊಂದಕ್ಕೆ ಅಕ್ಷಯ್‌ ಹಾಗೂ ಕೃತ್ಯ ಎಸಗಿದ ತಂಡದ ಸದಸ್ಯರ ಮಧ್ಯೆ ಮಾತಿನ ಚಕಮಕಿ ನಡೆದಿದ್ದು ಅದರ ಮುಂದುವರಿದ ಭಾಗವಾಗಿ ಅಕ್ಷಯ್‌ ನನ್ನು ನೆಹರೂ ನಗರಕ್ಕೆ ಬರಲು ಹೇಳಿ ಹತ್ಯೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಕೃತ್ಯವು ರಾತ್ರಿ 11.30 ಗಂಟೆ ಸುಮಾರಿಗೆ ನಡೆದಿದೆ ಎಂದು ತಿಳಿದು ಬಂದಿದೆ.

ನೆಹರೂ ನಗರದಿಂದ ವಿವೇಕಾನಂದ ಕಾಲೇಜಿಗೆ ತೆರಳುವ ರಸ್ತೆಯಲ್ಲಿ ಹೆದ್ದಾರಿಯ ತುಸು ದೂರದಲ್ಲಿರುವ ಕೆನಾರ ಬ್ಯಾಂಕಿನ ಎಟಿಎಂ ಬಳಿ ಅಕ್ಷಯ್‌ ಮೇಲೆ ತಂಡ ದಾಳಿ ನಡೆಸಿದ್ದು, ಅಲ್ಲಿಂದ ಆತನನ್ನು ಅಟ್ಟಾಡಿಸಿಕೊಂಡು ಬಂದು ತಲಾವರುನಿಂದ ದಾಳಿ ನಡೆಸಿದ್ದಾರೆ. ಎಟಿಎಂ ಬಳಿಯಿಂದ ಮಾಣಿ ಮೈಸೂರು ಹೆದ್ದಾರಿಯನ್ನು ದಾಟಿ ಆಚೆ ಬದಿ ಗಿಡಗಂಟಿಗಳಿಂದ ಅವೃತ್ತವಾದ ಜಾಗದವರೆಗೂ ಅಟ್ಟಾಡಿಸಿಕೊಂಡು ಹೋಗಿ ಹತ್ಯೆ ನಡೆಸಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಮಾಣಿ ಮೈಸೂರು ಹೆದ್ದಾರಿಯ ಒಂದು ಬದಿಯಿಂದ ಇನ್ನೊಂದು ಬದಿಯವರೆಗೆ ರಕ್ತದ ಕಲೆಗಳಿವೆ

ಅಕ್ಷಯ್‌ ಮೃತದೇಹ ಕಾಲೇಜಿಗೆ ಹೋಗುವ ರಸ್ತೆಯ ವಿರುದ್ದ ದಿಕ್ಕಿನಲ್ಲಿ ಹೆದ್ದಾರಿಯ ಅಂಚಿನಲ್ಲಿರುವ ಗಿಡಗಂಟಿಗಳಿಂದ ಅವೃತ್ತವಾದ ಹಡೀಲು ಬಿದ್ದ ಜಾಗದಲ್ಲಿ ಬಿದ್ದು ಕೊಂಡಿತ್ತು. ಒಟ್ಟು ಮೂವರಿದ್ದ ತಂಡ ಕೃತ್ಯ ಎಸಗಿರುವುದಾಗಿ ಪೊಲೀಸ್‌ ಮೂಲಗಳಿಂದ ತಿಳಿದು ಬಂದಿದೆ. ಈ ಪೈಕಿ ಇಬ್ಬರು ಕೃತ್ಯ ನಡೆದ ಕೆಲ ಗಂಟೆಯ ಬಳಿಕ ಮನೀಶ್‌ ಹಾಗೂ ಚೇತು ಎಂಬವರು ಪೊಲೀಸರಿಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದ್ದು . ಅವರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆಂದು ತಿಳಿದು ಬಂದಿದೆ. ಇನ್ನೊರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ ಎನ್ನಲಾಗುತ್ತಿದೆ
ಸಂಜೆ ವೇಳೆ ವಾಹನ ಅಪಘಾತದ ವಿಚಾರದಲ್ಲಿ ಅಕ್ಷಯ್‌ ಹಾಗೂ ಎದುರಾಳಿ ತಂಡದ ಮಧ್ಯೆ ಮಾತಿನ ಚಕಮಕಿ ನಡೆದಿತ್ತು. ಇದರ ನಷ್ಟದ ಬಾಬ್ತು ಮಾತನಾಡಲೆಂದು ಪುನ: ಅದೇ ತಂಡ ಅಕ್ಷಯ್‌ ನನ್ನು ರಾತ್ರಿ ವೇಳೆ ನೆಹರೂ ನಗರ ಬಳಿ ಕರೆದು ಕೃತ್ಯ ಎಸಗಿದೆ ಎನ್ನಲಾಗುತ್ತಿದೆ ಕೇವಲ 2 ಸಾವಿರ ರೂಪಾಯಿ ವಿಚಾರವಾಗಿ ಈ ಕೃತ್ಯ ನಡೆದಿದೆಯೇ ಎಂಬ ಬಗ್ಗೆ ಸಾರ್ವಜನಿಕ ವಲಯದಲ್ಲಿ ಶಂಕೆ ವ್ಯಕ್ತವಾಗುತ್ತಿದೆ

Leave a Reply

Your email address will not be published. Required fields are marked *