
ಪುತ್ತೂರು : ಹೃದಯಾಘಾತಕ್ಕೆ ಒಳಗಾಗಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಕಡಬ ತಾಲೂಕಿನ ನೆಲ್ಯಾಡಿ ಸಮೀಪದ ಕೌಕ್ರಾಡಿ ಗ್ರಾಮದಲ್ಲಿ ನ.6ರಂದು ಸಂಜೆ ನಡೆದಿದೆ. ಕೌಕ್ರಾಡಿ ಗ್ರಾಮದ ಶಾಂತಿಬೆಟ್ಟು ನಿವಾಸಿ ಯೂಸುಫ್ ಎಂಬವರ ಪುತ್ರ ಮಹಮ್ಮದ್ ಇರ್ಪಾನ್(18ವ.)ಮೃತಪಟ್ಟ ದುರ್ದೈವಿಯಾಗಿದ್ದಾರೆ. ಪುತ್ತೂರಿನ ಖಾಸಗಿ ಸಂಸ್ಥೆಯೊಂದರಲ್ಲಿ ಎ.ಸಿ.ಮೆಕ್ಯಾನಿಕ್ ವ್ಯಾಸಂಗ ಮಾಡುತ್ತಿದ್ದ ಇರ್ಪಾನ್ ಎಂದಿನಂತೆ ಶಾಲೆಗೆ ಹೋಗಿ ಸಂಜೆ ಮನೆಗೆ ಬಂದಿದ್ದರು. ಸಂಜೆ 6 ಗಂಟೆಯ ವೇಳೆಗೆ ಇರ್ಪಾನ್ ದಿಢೀರ್ ಅನಾರೋಗ್ಯಕ್ಕೆ ಒಳಗಾಗಿದ್ದು ಮನೆಯವರು ತಕ್ಷಣ ನೆಲ್ಯಾಡಿಯ ಅಶ್ವಿನಿ ಆಸ್ಪತ್ರೆಗೆ ಕರೆತಂದರಾದರೂ ಆ ವೇಳೆಗಾಗಲೇ ಆತ ಮೃತಪಟ್ಟಿದ್ದ ಎಂದು ವರದಿಯಾಗಿದೆ. ಇರ್ಪಾನ್ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಮೃತ ಬಾಲಕ ತಂದೆ ಯೂಸುಫ್, ತಾಯಿ ಅಮೀನಾ, ಮೂವರು ಸಹೋದರರು ಹಾಗೂ ಮೂವರು ಸಹೋದರಿಯರನ್ನು ಅಗಲಿದ್ದಾರೆ.


