ಬಂಟ್ವಾಳ: ಜಲ್ಲಿ ಸಾಗಿಸುವ ಬೃಹತ್ ಗಾತ್ರದ ಲಾರಿಯೊಂದು ಕಾರಿಗೆ ಡಿಕ್ಕಿಯಾಗಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅದೃಷ್ಟವಶಾತ್ ಕಾರು ಚಾಲಕ ಅಪಾಯದಿಂದ ಪಾರಾದ ಘಟನೆ ಗುರುವಾರ ಬೆಳಿಗ್ಗೆ ಬಂಟ್ವಾಳ ಸಮೀಪದ ಲೊರೆಟ್ಟೋ ಎಂಬಲ್ಲಿ ನಡೆದಿದೆ.
ಮೈಸೂರು ಮೂಲದ ಕೃಷ್ಣ ಅರಸ ಎಂಬವರ ಕಾರಿಗೆ ಕೆ.ಎನ್.ಆರ್.ಸಿ.ಕಂಪೆನಿಯ ಲಾರಿ ಡಿಕ್ಕಿಯಾಗಿದೆ.
ಕೃಷ್ಣ ಅರಸ ಅವರು ಮೈಸೂರಿನಿಂದ ಬಂಟ್ವಾಳ ಕಡೆಯಿಂದ ಮೂಡಬಿದಿರೆ ಅಳ್ವಾಸ್ ಕಾಲೇಜಿಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ಕೃಷ್ಣ ಅರಸ ಅವರ ಮಗಳು ಮೂಡಬಿದಿರೆಯ ಅಳ್ವಾಸ್ ಕಾಲೇಜಿನಲ್ಲಿ ಶಿಕ್ಷಣ ಪಡೆಯುತ್ತಿದ್ದ ದೀಪಾವಳಿ ರಜೆ ನಿಮಿತ್ತ ಊರಿಗೆ ಕರೆದುಕೊಂಡು ಹೋಗುವ ಉದ್ದೇಶದಿಂದ ಮೂಡಬಿದಿರೆಯ ಕಡೆಗೆ ತೆರಳುವ ವೇಳೆ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬರುತ್ತಿದ್ದ ಲಾರಿ ಎದುರಿನಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಆದರೆ ಅದೃಷ್ಟವಶಾತ್ ಕಾರು ಚಲಾಯಿಸುತ್ತಿದ್ದ ಕೃಷ್ಣ ಅವರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.