
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳು ಪೂರೈಕೆ ಆರಂಭಿಸಲು ಆಗ್ರಹಿಸಿ ದ.ಕ. ಜಿಲ್ಲಾ ಗುತ್ತಿಗೆದಾರರ ಸಂಘದ ನೇತೃತ್ವದಲ್ಲಿ ನ. 10ರಂದು ಅಪರಾಹ್ನ 3 ಕ್ಕೆ ಮಂಗಳೂರಿನ ಕುದ್ಮುಲ್ ರಂಗವಾವ್ ಪುರಭವನದ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಸಂಘದ ಅಧ್ಯಕ್ಷ ಮಹಾಬಲ ಕೊಟ್ಟಾರಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಸಿಆರ್‌ಝಡ್ ಮತ್ತು ನಾನ್ ಸಿಆರ್‌ಝಡ್’ ಎರಡು ವಲಯಗಳಲ್ಲಿ ಮರಳುಗಾರಿಕೆ ಮತ್ತು ಸಾಗಾಣಿಕೆ ಸಂಪೂರ್ಣ ಸ್ಥಗಿತಗೊಂಡಿದ್ದು ಕಟ್ಟಡ ಕಾಮಗಾರಿಗಳು ನಿಂತು ಹೋಗಿವೆ. ಈ ಬಗ್ಗೆ ಮುಖ್ಯಮಂತ್ರಿ, ಉಸ್ತುವಾರಿ, ಸಚಿವರು, ಗಣಿ ಇಲಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಈ ಹಿನ್ನೆಲೆಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.


