Visitors have accessed this post 569 times.
ಮಂಗಳೂರು: ಮಂಗಳೂರಿನಲ್ಲಿ ಚಾಕುವಿನಿಂದ ಇರಿದುಕೊಂಡು ಬ್ಯಾಂಕಿನ ಹಿರಿಯ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ವಾದಿರಾಜ್(55) ಆತ್ಮಹತ್ಯೆ ಮಾಡಿಕೊಂಡ ಬ್ಯಾಂಕ್ ಅಧಿಕಾರಿ.
ಇನ್ನು ವಾದಿರಾಜ್ ಅವರು ಮನೆಯಲ್ಲಿ ಯಾರೂ ಇಲ್ಲದ ವೇಳೆ ಚಾಕುವಿನಿಂದ ಹೊಟ್ಟೆ ಹಾಗೂ ಕೊರಳಿಗೆ ಚುಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮನೆಮಂದಿ ಬಂದು ನೋಡಿದಾಗ ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಿದರೂ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ವಾದಿರಾಜ್ ಅವರು ಪತ್ನಿ, ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.