Visitors have accessed this post 259 times.
ಬೆಂಗಳೂರು : ರಾಜ್ಯ ಸರ್ಕಾರದ 5 ನೇ ಗ್ಯಾರಂಟಿ ಯೋಜನೆಯಾದ ಡಿಪ್ಲೋಮಾ, ಪದವೀಧರರಿಗೆ ನಿರುದ್ಯೋಗ ಭತ್ಯೆ ನೀಡುವ ಯುವನಿಧಿ ಯೋಜನೆಗೆ ರಾಜ್ಯ ಸರ್ಕಾರ ಸಿದ್ಧತೆ ನಡೆಸಿದ್ದು, 2024 ರ ಜನವರಿಯಿಂದ ಜಾರಿಗೊಳಿಸುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಮಧು ಬಂಗಾರಪ್ಪ ಅವರು, ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಯುವನಿಧಿ ಯೋಜನೆಯನ್ನು ಜನವರಿಯಿಂದ ಜಾರಿಗೊಳಿಸಲಾಗುತ್ತಿದ್ದು, ಡಿಪ್ಲೋಮಾ ಪೂರ್ಣಗೊಳಿಸಿದವರಿಗೆ 1,500 ರೂ. ಪದವಿ ಪೂರ್ಣಗೊಂಡವರಿಗೆ 3,000 ರೂ. ಹಣವನ್ನು ವಿದ್ಯಾರ್ಥಿಗಳ ಖಾತೆಗೆ ಜಮಾ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಶಿಕ್ಷಣ ಮುಗಿಸಿ ಕೆಲಸ ಸಿಗದೆ ಮನೆಯಲ್ಲಿರುವ ವಿದ್ಯಾರ್ಥಿಗಳು ತಂದೆ-ತಾಯಿಗಳಿಗೆ ಹೊರೆಯಾಗದಿರಲೆಂದು ಹಾಗೂ ತಮ್ಮ ಸಣ್ಣ ಪುಟ್ಟ ಖರ್ಚುಗಳು, ಉದ್ಯೋಗ ಹುಡುಕಲು ಅನುಕೂಲವಾಗಲೆಂಬ ಉದ್ದೇಶದಿಂದ ಯುವನಿಧಿ ಯೋಜನೆಯನ್ನು ಜನವರಿಯಿಂದ ಜಾರಿಗೆ ತರಲಾಗುತ್ತಿದೆ ಎಂದು ಹೇಳಿದ್ದಾರೆ.