ಉಪ್ಪಿನಂಗಡಿ : ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪ್ರೀತಿಸುವಂತೆ ಒತ್ತಾಯಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಯುವಕನೋರ್ವನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೊಕೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಮುಝಮ್ಮಿಲ್ (19) ಎಂದು ಗುರುತಿಸಲಾಗಿದೆ. ಈತ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ಶಾಲೆಯೊಂದರ ವಿದ್ಯಾರ್ಥಿನಿಯ ಮೊಬೈಲ್ ಪೋನ್‌ಗೆ ಸಂದೇಶ ಕಳುಹಿಸಿ ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ. ಅಲ್ಲದೇ ಅಕ್ಟೋಬರ್ 10ರಂದು ಆಕೆಯೊಂದಿಗೆ ಅನುಚಿತವಾಗಿ ವರ್ತಿಸಿದನಲ್ಲದೇ ಹಾಗೂ ನವೆಂಬರ್ 6ರಂದು ವಿದ್ಯಾರ್ಥಿನಿಗೆ ಪುನ: ಮೊಬೈಲ್ ಸಂದೇಶ ಕಳುಹಿಸಿ ಹಿಂಸಿಸುತ್ತಿದ್ದ. ಇದರಿಂದ ವಿದ್ಯಾರ್ಥಿನಿಯು ಮಾನಸಿಕವಾಗಿ ಕುಗ್ಗಿ ಹೋಗಿರುತ್ತಾಳೆಂದು ಆಕೆಯ ತಾಯಿ ಉಪ್ಪಿನಂಗಡಿಗೆ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಉಪ್ಪಿನಂಗಡಿ ಪೊಲೀಸರು ಆರೋಪಿಯ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.