November 28, 2025
WhatsApp Image 2023-11-14 at 3.04.31 PM

ಉಡುಪಿ: ಸಂತೆಕಟ್ಟೆಯ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯು ನಾಲ್ವರನ್ನು ಕೊಲೆ ಮಾಡಿದ ಬಳಿಕ ಪೊಲೀಸರಿಗೆ ತನ್ನ ಸುಳಿವು ಸಿಗದಂತೆ ಉಡುಪಿ ನಗರದೊಳಗೆ ನಾಲ್ಕು ಬಾರಿ ವಾಹನ ಬದಲಾಯಿಸಿ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.

ಟೆಕ್ನಿಕಲ್ ಎವಿಡೆನ್ಸ್ ಆಧಾರದ ಮೇಲೆ ಆರೋಪಿಯ ಜಾಡನ್ನು ಪೊಲೀಸರು ಪತ್ತೆ ಹಚ್ಚುತ್ತಿದ್ದಾರೆ. ಈಗಾಗಲೇ ಆರೋಪಿಯ ಬಂಧನಕ್ಕೆ ಉಡುಪಿ ಜಿಲ್ಲಾ ಪೊಲೀಸ್ ಐದು ತಂಡಗಳನ್ನು ರಚನೆ ಮಾಡಿದ್ದು, ಕೊಲೆಗೆ ಆರ್ಥಿಕ ವ್ಯವಹಾರ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ. ಆದರೆ ಈವರೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಯಾವುದೇ ಮಹತ್ವದ ಸುಳಿವು ದೊರೆತಿಲ್ಲ.

ಇನ್ನು ಆರೋಪಿ ಕುರಿತಂತೆ ಸಾಕಷ್ಟು ಸಿಸಿಟಿವಿ ಫೋಟೇಜ್ ಗಳು ಸಿಕ್ಕರು ಆತನನ್ನು ಪತ್ತೆ ಮಾಡಲು ಪೊಲೀಸರಿಂದ ಸಾಧ್ಯವಾಗಿಲ್ಲ. ಆದ್ದರಿಂದ ಪೊಲೀಸರು ಬೇರೆ ಬೇರೆ ಜಿಲ್ಲೆಗಳಲ್ಲೂ ತನಿಖೆ ನಡೆಸುತ್ತಿದ್ದಾರೆ.

ಘಟನೆಯಲ್ಲಿ ಚಾಕು ಇರಿತಕ್ಕೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಹಾಜಿರಾ ಎನ್ನುವ ಮಹಿಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ತಿಳಿದು ಬಂದಿದೆ.

About The Author

Leave a Reply