October 21, 2025
WhatsApp Image 2023-11-16 at 6.30.01 PM

ಡುಪಿ: ತಾಯಿ ಮತ್ತು ಮೂವರು ಮಕ್ಕಳ ಬರ್ಬರ ಹತ್ಯೆ ಪ್ರಕರಣದ ಆರೋಪಿಯನ್ನು ನೇಜಾರಿನಲ್ಲಿ ಸ್ಥಳ ಮಹಜರಿಗೆ ಕರೆ ತಂದ ವೇಳೆಯಲ್ಲಿ ಸ್ಥಳೀಯ ಜನತೆ ನ್ಯಾಯಾಕ್ಕಾಗಿ ಆಗ್ರಹಿಸಿ ರಸ್ತೆ ತಡೆದು ತಮ್ಮ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಡೆದಿದೆ.

ಹತ್ಯೆ ನಡೆದ ಮನೆಗೆ ಬಂಧಿತ ಆರೋಪಿ ಮಹಾರಾಷ್ಟ್ರದ ಸಾಂಗ್ಲಿ ಮೂಲದ ಪ್ರವೀಣ್ ಚೌಗಲೆ (39)ಯನ್ನು ಪೊಲೀಸರು ಸ್ಥಳ
ಮಹಜರಿಗೆ ಬಿಗಿ ಭದ್ರತೆಯ ನಡುವೆ ಕರೆತಂದಿದ್ದಾರೆ.

ಈ ವೇಳೆ ಜಮಾಯಿಸಿದ್ದ ಸ್ಥಳೀಯರು ಆರೋಪಿ ವಿರುದ್ಧ ಆಕ್ರೋಶ ಹೊರ ಹಾಕಿ ಆರೋಪಿಯನ್ನು ನಮ್ಮ ಕೈಗೆ ಒಪ್ಪಿಸಿ ನಾವು ಶಿಕ್ಷೆ ಕೊಡುತ್ತೇವೆ ಎಂದು ಘೋಷಣೆ ಕೂಗಿದ್ದಾರೆ. ಜನರ ಆಕ್ರೋಶ ಹೆಚ್ಚಾಗುತ್ತಿದ್ದಂತೆ ಪೊಲೀಸರು ಲಾಠಿ ಪ್ರಹಾರ ನಡೆಸಿ ಉದ್ರಿಕ್ತರನ್ನು ಚದುರಿಸಿದ್ದಾರೆ. ಆತ 15 ನಿಮಿಷ ತೆಗೆದುಕೊಂಡಿದ್ದಾನೆ ನಮಗೆ 30 ಸೆಕೆಂಡು ಅವನನ್ನು ಕೊಡಿ ಎಂದ ಸಾರ್ವಜನಿಕರು.

ತೃಪ್ತಿ ನಗರ ದಲ್ಲಿ ಪೊಲೀಸರ ವಿರುದ್ಧ ಸಾರ್ವಜನಿಕರ ಧಿಕ್ಕಾರ ಕೂಗಿದರು. ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಯಿತು. ಜನಾಕ್ರೋಶದ ನಡುವೆ ಮಹಜರು ಮುಗಿಸಿ ಆರೋಪಿಯನ್ನು ಕರೆದುಕೊಂಡ ಹೋಗಲಾಯಿತು. ಸ್ಥಳಕ್ಕೆ ಎಸ್ ಪಿ, ಡಿ ಸಿ ಬರಬೇಕು ಎಂದು ಸಾರ್ವಜನಿಕರ ಆಗ್ರಹಿಸಿ ರಸ್ತೆ ತಡೆ ಮೂಲಕ ಸಾರ್ವಜನಿಕರು ಪ್ರತಿಭಟಿಸಿದರು.

ನಿನ್ನೆ ಬುಧವಾರ ಪ್ರವೀಣ್ ಚೌ ಗಲೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು, ನ್ಯಾಯಾಲಯ 14 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ
ನೀಡಿದೆ.

About The Author

Leave a Reply