ಉಪ್ಪಿನಂಗಡಿ: ಲಾರಿ-ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕೋಣಾಲು ಗ್ರಾಮದ ಕೋಲ್ಪೆ ಎಂಬಲ್ಲಿ ನಡೆದಿದೆ. ಮೃತರನ್ನು ಕರೋಪಾಡಿ ನಿವಾಸಿ ಹರಿಶ್ಚಂದ್ರ ಎಂಬವರ ಪುತ್ರ ದೀಕ್ಷಿತ್ (23) ಎಂದು ಗುರುತಿಸಲಾಗಿದೆ. ದೀಕ್ಷಿತ್ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಕೋಲ್ಪೆ ಮಸೀದಿ ಬಳಿ ಬೈಕ್ ಸವಾರನ ನಿಯಂತ್ರಣ ತಪ್ಪಿ ಲಾರಿಯ ಮುಂಭಾಗಕ್ಕೆ ಢಿಕ್ಕಿ ಹೊಡೆದಿದ್ದು ಪರಿಣಾಮ ಬೈಕ್ ಸಹಿತ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡ ದೀಕ್ಷಿತ್‌ರನ್ನು ಕೂಡಲೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಯಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರೆಂದು ಕೋಲ್ಪೆ ನಿವಾಸಿ ಇಸ್ಮಾಯಿಲ್ ಎಂಬವರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.