August 30, 2025
cm1

ಬೆಳ್ತಂಗಡಿ : ಸಿಎಂ ಸಿದ್ದರಾಮಯ್ಯ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ರೀತಿಯಲ್ಲಿ ಮಾತಾನಾಡಿದ ಆಡಿಯೋ ವೈರಲ್ ಅಗಿದ್ದು, ಈ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ನ.19 ರಂದು ಸಂಜೆ ದೂರು ನೀಡಿದ್ದಾರೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಕೋರಿಗದ್ದೆ ನಿವಾಸಿಯಾಗಿರುವ ವೃತ್ತಿಯಲ್ಲಿ ಸೆಲೂನ್ ಅಂಗಡಿಯಲ್ಲಿ ಕೆಲಸ ಮಾಡುವ ಕೊಕ್ಕಡ ಬಿಜೆಪಿ ಕಾರ್ಯಕರ್ತನಾಗಿರುವ ರಜಿತ್ ಕೊಕ್ಕಡ @ ರಜಿತ್ ಭಂಡಾರಿ ಎಂಬಾತ ಸಾಮಾಜಿಕ ಜಾಲತಾಣದಲ್ಲಿ ಸಿದ್ದರಾಮಯ್ಯ ಬಗ್ಗೆ ಅಶ್ಲೀಲವಾಗಿ ನಿಂದಿಸಿ ಮಾತಾನಾಡಿರುವ ಆಡಿಯೋ ಹರಿಯಬಿಟ್ಟಿದ್ದು ಇದರ ಬಗ್ಗೆ ಬೆಳ್ತಂಗಡಿ ಕಾಂಗ್ರೆಸ್ ಕಾರ್ಯಕರ್ತ ಹಕಿಮ್ ಕೊಕ್ಕಡ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಧರ್ಮಸ್ಥಳ ಪೊಲೀಸರು ಆರೋಪಿ ಕೊಕ್ಕಡ ಗ್ರಾಮದ ಕೋರಿಗದ್ದೆ ನಿವಾಸಿ ರಜಿತ್ ಕೊಕ್ಕಡ @ ರಜಿತ್ ಭಂಡಾರಿ ಮೇಲೆ ಐಪಿಸಿ 1860 (u/s 153A,504,505(2)) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

About The Author

Leave a Reply