August 30, 2025
WhatsApp Image 2023-11-22 at 7.24.21 PM

ಸುರತ್ಕಲ್‌ : ಅಪಘಾತದಲ್ಲಿ ಗಾಯಗೊಂಡಿದ್ದ ಬಾಲಕನೋರ್ವ ಚಿಕಿತ್ಸೆಯ ವೇಳೆ ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯದಿಂದ ಘಟನೆ ನಡೆದಿದೆ ಎಂದು ಮೃತ ಬಾಲಕನ ಕುಟುಂಬದವರು ಆರೋಪಿಸಿದ್ದಾರೆ. ಮೃತ ಬಾಲಕನನ್ನು ಹಸನ್‌ ಬಾವ ಎಂಬವರ ಪುತ್ರ ಮೊಯ್ದಿನ್ ಫರ್ಹಾನ್ (17) ಎಂದು ಗುರುತಿಸಲಾಗಿದೆ. ಮುಕ್ಕದಲ್ಲಿ ನಿನ್ನೆ ರಾತ್ರಿ 8 ಗಂಟೆಯ ಸುಮಾರಿಗೆ ಅಪಘಾತ ನಡೆದಿದ್ದು, ಈ ವೇಳೆ ಗಾಯಗೊಂಡಿದ್ದ ಮೊಯ್ದಿನ್‌ ಫರ್ಹಾನ್‌ ನನ್ನು ಸುರತ್ಕಲ್‌ ನಲ್ಲಿರುವ ಅಥರ್ವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಪಘಾತ ನಡೆದ ಬಳಿಕ ಬಾಲಕ ಮನೆಯವರು ಹಾಗು ಸ್ನೇಹಿತರೊಂದಿಗೆ ಮಾತನಾಡಿದ್ದ ಎಂದು ತಿಳಿದುಬಂದಿದ್ದು, ತುರ್ತು ಶಸ್ತ್ರಚಿಕಿತ್ಸೆ ನಡೆಸಲು ಹೇಳಿದ್ದ ವೈದ್ಯಾಧಿಕಾರಿ ಶಸ್ತ್ರ ಚಿಕಿತ್ಸೆಯ ವೇಳೆ ನೀಡಿದ್ದ ಅನಸ್ತೇಶಿಯಾ ಓವರ್ ಡೋಸ್ ನೀಡಿದ ಪರಿಣಾಮ ಬಾಲಕ ಮೃತಪಟ್ಟಿರುವುದಾಗಿ ಕುಟುಂಬದವರು ಆರೋಪ ಮಾಡಿದ್ದಾರೆ.

ಇಂದು ಬೆಳಗ್ಗೆ 9ಕ್ಕೆ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ಮಧ್ಯಾಹ್ನವಾದರೂ ಎಚ್ಚರಗೊಳ್ಳದ ಬಾಲಕ ನಂತರ ಮೃತಪಟ್ಟಿರುವುದಾಗಿ ಹೇಳಲಾಗಿದ್ದು, ಶಸ್ತ್ರ ಚಿಕಿತ್ಸೆಯ ನೆಪದಲ್ಲಿ ಬಾಲಕನನ್ನು ಕೊಲೆ ಮಾಡಲಾಗಿದೆ ಎಂದು ಕುಟುಂಬದವರು ಆರೋಪ ಮಾಡಿದ್ದಾರೆ. ಈ ಬಗ್ಗೆ ಸುರತ್ಕಲ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ವೈದ್ಯರ ನಿರ್ಲಕ್ಷ್ಯವನ್ನು ಖಂಡಿಸಿ ಅಥರ್ವ ಆಸ್ಪತ್ರೆಯ ಮುಂಭಾಗದಲ್ಲಿ ಕುಟುಂಬಸ್ಥರು ಮತ್ತು ಸ್ಥಳೀಯರು ಪ್ರತಿಭಟನೆ ಮಾಡುತ್ತಿದ್ದಾರೆ.

About The Author

Leave a Reply