October 13, 2025
WhatsApp Image 2023-11-23 at 10.33.05 AM

ಮಂಗಳೂರು: ಲಾಡ್ಜ್ ನ ರೂಮ್ ವೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಸುಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾದ ಘಟನೆ ಸಂಭವಿಸಿದೆ. ಯಶ್ರಾಜ್ ಎಸ್.‌ಸುವರ್ಣ(43) ಮೃತಪಟ್ಟವರು. ನಗದರ ಬೆಂದೂರ್ ವೆಲ್ ಲಾಡ್ಜ್ ನಲ್ಲಿ ಮಧ್ಯರಾತ್ರಿ ಬಳಿಕ‌ ಸುಮಾರು 12:35 ಕ್ಕೆ ಬೆಂಕಿ ಹತ್ತಿಕೊಂಡಿದೆ ಎನ್ನಲಾಗಿದೆ. ಯಶ್ರಾಜ್ ಅವರ ಮೃತದೇಹ ಮಲಗಿದ ಸ್ಥಿತಿಯಲ್ಲಿದ್ದು, ಬಾಗಿಲಿನ ಚಿಲಕ ಹಾಕಿಕೊಂಡಿದ್ದರು.‌ ಅನಂತರ ಲಾಡ್ಜ್ ನವರು ತೆರೆದಾಗ ಬೆಂಕಿ ಆವರಿಸಿತ್ತು. ಅಗ್ನಿಶಾಮಕದವರಿಗೆ ತಿಳಿಸಿದರು ಎನ್ನಲಾಗಿದೆ. ಪಾಂಡೇಶ್ವರ ಅಗ್ನಿಶಾಮಕ ಠಾಣೆಯವರು ಬೆಂಕಿ‌ ನಂದಿಸಿದ್ದಾರೆ. ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ನಡೆಯುತ್ತಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.

About The Author

Leave a Reply