November 9, 2025
WhatsApp Image 2023-11-24 at 11.28.21 AM

ಶಿವಮೊಗ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದುಳಿದವರಿಗೆ, ದಲಿತರಿಗೆ ದ್ರೋಹ ಮಾಡುತ್ತಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನ್ಯಾಯಾಲಯಕ್ಕೆ ಅಲೆದಾಡುತ್ತಿದ್ದಾರೆ. ಸಚಿವ ಸಂಪುಟದ ಪಾವಿತ್ರ್ಯತೆಯನ್ನೇ ಹಾಳು ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

 

ಶಿವಮೊಗ್ಗದಲ್ಲಿ ಮಾತನಾಡಿದ ಈಶ್ವರಪ್ಪ, ನೂರಕ್ಕೆ ನೂರರಷ್ಟು ಡಿ.ಕೆ.ಶಿವಕುಮಾರ್ ಅವರ ವಿರುದ್ಧ ತೀರ್ಪು ಬರಲಿದೆ. ನೂರಕ್ಕೆ ನೂರರಷ್ಟು ಡಿ.ಕೆ.ಶಿವಕುಮಾರ್ ಜೈಲಿಗೆ ಹೋಗಲಿದ್ದಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಈಶ್ವರಪ್ಪ ಹೇಳಿದ್ದಾರೆ.

ಡಿ.ಕೆ.ಸಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಯನ್ನು ವಾಪಸ್ ಪಡೆಯುವ ಪ್ರಸ್ತಾವನೆಗೆ ಸಚಿವ ಸಂಪುಟ ಅನುಮೋದನೆ ನೀಡಿರುವುದು ಸಿದ್ದರಾಮಯ್ಯ ರಾಜಕೀಯ ಜೀವನದಲ್ಲಿ ಇದೊಂದು ಕಪ್ಪು ಚುಕ್ಕೆ ಡಿ.ಕೆ.ಶಿವಕುಮಾರ್ ಸಲುವಾಗಿ ಸಿದ್ದರಾಮಯ್ಯ ಕಪ್ಪು ಚುಕ್ಕೆ ಅಂಟಿಸಿಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಗ್ಯಾರಂಟಿ ಯೋಜನೆ ಹೆಸರಲ್ಲಿ ಮೋಸ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ. ಕಾಂಗ್ರೆಸ್ ನಯಕರಿಗೆ ನಾಚಿಕೆಯಗಬೇಕು. ಮುಂದಿನ ಚುನವನೆಯಲ್ಲಿ ಜನ ಬುದ್ಧಿ ಕಲಿಸಲಿದ್ದಾರೆ ಎಂದು ಗುಡುಗಿದರು.

About The Author

Leave a Reply