ಬೆಳ್ತಂಗಡಿ: ಬೈಕ್ ನ ಸೈಡ್ ಸ್ಟ್ಯಾಂಡ್ ತೆಗೆಯದೆ ಬೈಕ್ ಚಲಾಯಿಸಿದ ಪರಿಣಾಮ ಬೈಕ್ ನಿಯಂತ್ರಣ ಡಿವೈಡರ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸಾವನಪ್ಪಿದ ಘಟನೆ ಬೆಳ್ತಂಗಡಿಯ ಉಜಿರೆಯಲ್ಲಿ ನಡೆದಿದ್ದು, ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.ಮೃತ ಯುವಕನನ್ನು ಧರ್ಮಸ್ಥಳ ಗ್ರಾಮದ ನೇತ್ರಾವತಿ ನಿವಾಸಿ ದೀಕ್ಷಿತ್ ಎಂದು ಗುರುತಿಸಲಾಗಿದೆ. ಕಾಲೇಜಿನಲ್ಲಿ ಸ್ಪೋರ್ಟ್ಸ್ ಡೇ ಕಾರ್ಯಕ್ರಮ ಇದ್ದ ಕಾರಣ ದೀಕ್ಷಿತ್ ಮಧ್ಯಾಹ್ನ ಊಟ ಮಾಡಿ ವಾಪಸ್ ಬರುವ ವೇಳೆ ಬೈಕ್ ಸ್ಟ್ಯಾಂಡ್ ತೆಗೆಯದೆ ಚಲಾಯಿಸಿಕೊಂಡು ಬಂದ ಕಾರಣ ಡಿವೈಡರ್ ಗೆ ಬೈಕ್ ಢಿಕ್ಕಿ ಹೊಡೆದಿದೆ.ಈ ಸಂದರ್ಭ ಬೈಕ್ ಮಗುಚಿದ್ದು, ದೀಕ್ಷಿತ್ ತಲೆಗೆ ಗಂಭೀರ ಗಾಯಗಳಾಗಿದ್ದವು. ಉಜಿರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ದೀಕ್ಷಿತ್ ಸಾವನ್ನಪ್ಪಿದ್ದಾರೆ.