Visitors have accessed this post 419 times.
ಬೆಂಗಳೂರು: ಆದಾಯ ಮೀರಿದ ಆಸ್ತಿ ಗಳಿಕೆ ಆರೋಪ ಪ್ರಕರಣ ಸಂಬಂಧ, ಡಿಸಿಎಂ ಡಿಕೆ ಶಿವಕುಮಾರ ವಿರುದ್ಧ ಹಿಂದಿನ ಬಿಜೆಪಿ ಸರ್ಕಾರ ಸಿಬಿಐ ತನಿಖೆಗೆ ಆದೇಶ ನೀಡಿತ್ತು. ನಿನ್ನೆ ನಡೆದ ಸಂಪುಟ ಸಭೆಯಲ್ಲಿ ಬಿಜೆಪಿ ನೀಡಿದ್ದ ಆದೇಶವನ್ನ ವಾಪಸ್ ಪಡೆಯಲು ನಿರ್ಣಯ ಕೈಗೊಳ್ಳಲಾಗಿದೆ.
ಈ ಕುರಿತಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ತನಿಖೆಯನ್ನು ಸಿಬಿಐಗೆ ವಹಿಸುವಾಗ ಡಿ.ಕೆ.ಶಿವಕುಮಾರ್ ಶಾಸಕರಾಗಿದ್ದರು. ಸಿಬಿಐ ತನಿಖೆಗೆ ನೀಡುವ ಮುನ್ನ ಸ್ಪೀಕರ್ ಅನುಮತಿ ಪಡೆದಿರಲಿಲ್ಲ. ಸ್ಪೀಕರ್ ಅನುಮತಿ ಪಡೆದ ಬಳಿಕ ಸಿಎಂ ಆದೇಶ ಹೊರಡಿಸಬೇಕು. ಸಿಬಿಐ ತನಿಖೆಗೆ ಅನುಮತಿ ನೀಡಿದ್ದು ಕಾನೂನುಬಾಹಿರ ಎಂದು ಹೇಳಿದ್ದಾರೆ.
ಇಂದು ಬೆಳಗ್ಗೆ ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಇದೇ ವಿಚಾರವಾಗಿ ಚರ್ಚೆ ಕೂಡ ನಡೆದಿದೆ. ಸಿಎಂ ಸಿದ್ದರಾಮಯ್ಯ ಭೇಟಿಯಾದ ಗೃಹ ಸಚಿವ ಪರಮೇಶ್ವರ್, ಅರ್ಧಗಂಟೆಗೂ ಅಧಿಕ ಕಾಲ ಚರ್ಚೆ ಮಾಡಿದ್ದಾರೆ.