Visitors have accessed this post 221 times.

ಬೆಳ್ತಂಗಡಿ: ಶೆಡ್‌ನಲ್ಲಿ ನಿಲ್ಲಿಸಿದ್ದ ಕಾರು ಕಳವು ಪ್ರಕರಣ – ನಾಲ್ವರು ಆರೋಪಿಗಳ ಸೆರೆ

Visitors have accessed this post 221 times.

ಬೆಳ್ತಂಗಡಿ: ಕಾರು ಕಳವು ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ ಬಂಧಿತ ಆರೋಪಿಗಳನ್ನು ಕಿನ್ನಿಗೋಳಿ ತಾಳಿಪ್ಪಾಡಿ ಗ್ರಾಮದ ಅಜಯ್ ಶೆಟ್ಟಿ(32), ಬೆಳ್ತಂಗಡಿ ತಾಲೂಕಿನ ಸೋಣಂದೂರು ಗ್ರಾಮದ ಗಾಣದಬೆಟ್ಟು ಸೂರಜ್ ಶೆಟ್ಟಿ(23), ಇಳಂತಿಲ ಗ್ರಾಮದ ಎನ್ಮಾಡಿ ನಿವಾಸಿ ಮಂಜುನಾಥ ಪೂಜಾರಿ(30), ಬಂಟ್ವಾಳ ತಾಲೂಕಿನ ಶಂಭೂರು ಗ್ರಾಮದ ಪರೆಕಲ್ ನಿವಾಸಿ ಕಿಶೋರ್.ಟಿ (32) ಎಂದು ಗುರುತಿಸಲಾಗಿದೆ. ಬೆಳ್ತಂಗಡಿ ತಾಲೂಕು ಚಾರ್ಮಾಡಿ ಗ್ರಾಮದ ಕಕ್ಕಿಂಜೆ ಎಂಬಲ್ಲಿ ನ.9ರಂದು ರಾತ್ರಿ ನೌಫಲ್‌ ಎಂಬವರು ತಮ್ಮ ಕಾರ್ ಶೆಡ್‌ನಲ್ಲಿ ನಿಲ್ಲಿಸಿದ್ದ ಕಾರನ್ನು ನೌಫಲ್‌ರ ಗೆಳೆಯ ಸೈಫುದ್ದೀನ್ ಎಂಬವರ ಗೆಳೆಯರಾದ ಸೂರಜ್ ಶೆಟ್ಟಿ ಮತ್ತು ಅಜಯ್‌ ಶೆಟ್ಟಿ ಬಾಡಿಗೆಗೆ ನೀಡುವಂತೆ ಕೇಳಿದ್ದು, ಕಾರನ್ನು ನೀಡಿರಲಿಲ್ಲ. ಈ ನಡುವೆ ನೌಫಲ್‌ರ ಕಾರು ಕಳವಾಗಿತ್ತು. ಕಾರನ್ನು ಮ ಸೂರಜ್ ಶೆಟ್ಟಿ ಮತ್ತು ಅಜಯ್ ಶೆಟ್ಟಿಯವರು ಕಳವು ಮಾಡಿಕೊಂಡು ಹೋಗಿರುವ ಬಗ್ಗೆ ಸಂಶಯ ವ್ಯಕ್ತಪಡಿಸಿ ನೌಫಲ್‌ ಪೊಲೀಸರಿಗೆ ದೂರು ನೀಡಿದ್ದರು. ಈ ಬಗ್ಗೆ ತನಿಖೆ ಕೈಗೊಂಡ ಧರ್ಮಸ್ಥಳ ಎಸ್ಸೈ ಅನಿಲ್ ಸ ಕುಮಾರ್ ನೇತೃತ್ವದ ತಂಡ ಕಳ್ಳತನವಾದ ಕಾರು ಸಹಿತ ಪ್ರಕರಣದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳನ್ನು ಬೆಳ್ತ೦ಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *