ಬೆಂಗಳೂರು ಕಂಬಳ ಆಯೋಜಕರ ವಿರುದ್ಧ ಕೇಸ್ ದಾಖಲು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಆಯೋಜಿಸಲಾಗಿದ್ದ ಕಂಬಳಕ್ಕೆ ತೆರೆಬಿದ್ದಿದೆ. ಈ ನಡುವೆ ಕಂಬಳ ಆಯೋಜಕರ ವಿರುದ್ಧ ದೂರು ದಾಖಲಾಗಿದೆ.

ನಿಯಮ ಉಲ್ಲಂಘನೆ ಮಾಡಿ ಸಾರ್ವಜನಿಕ ಸ್ಥಳಗಳಲ್ಲಿ ಕಂಬಳ ಫ್ಲೆಕ್ಸ್, ಬ್ಯಾನರ್ ಅಳವಡಿಕೆ ಮಾಡಿದ್ದ ಹಿನ್ನೆಲೆಯಲ್ಲಿ ಬಿಬಿಎಂಪಿ ವಾರ್ಡ್ ಕಂದಾಯ ನಿರೀಕ್ಷಕ ನೀಡಿದ ದೂರಿನ ಹಿನ್ನೆಲೆಯಲ್ಲಿ ಕಂಬಳ ಆಯೋಜಕರ ವಿರುದ್ಧ ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಕಂಬಳ ಆಯೋಜಕರು ಅನುಮತಿ ಪಡೆಯದೇ ಫ್ಲೆಕ್ಸ್, ಬ್ಯಾನರ್ ಅಳವಡಿಕೆ ಮಾಡಿದ್ದು, ನಿಯಮ ಉಲ್ಲಂಘನೆಯಾಗಿದೆ ಎಂದು ದೂರಲಾಗಿದೆ. ಬಿಬಿಎಂಪಿ ಅನುಮತಿ ಇಲ್ಲದೇ ಫ್ಲೆಕ್ಸ್, ಬ್ಯಾನರ್ ಅಳವಡಿಸಿದ್ದಕ್ಕೆ ಕಂಬಳ ನಡೆಯುತ್ತಿದ್ದ ವೇಳೆಯೇ ಅರಮನೆ ಮೈದಾನದಲ್ಲಿ ದಾಳಿ ನಡೆಸಿದ್ದ ಪಾಲಿಕೆ ಅಧಿಕಾರಿಗಳು ಅನಧಿಕೃತ ಫ್ಲೆಕ್ಸ್, ಬ್ಯಾನರ್ ಗಳನ್ನು ತೆರವು ಮಾಡಿದ್ದರು. ಈಗ ಕಂಬಳ ಆಯೋಜಕರ ವಿರುದ್ಧವೇ ಕೇಸ್ ದಾಖಲಿಸಲಾಗಿದೆ.

Leave a Reply