
ಮಂಗಳೂರು: ಮಂಗಳೂರಿನ ಅತ್ತಾವರದ ಅಪಾರ್ಟ್ ಮೆಂಟ್‌ವೊಂದರಲ್ಲಿ ಇಂದು ಬೆಳಗ್ಗೆ ನಡೆದ ಆಕಸ್ಮಿಕ ಬೆಂಕಿ ಅನಾಹುತದಲ್ಲಿ ಗಂಭೀರ ಗಾಯಗೊಂಡಿದ್ದ ವೃದ್ಧೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.ಶಾಹಿನಾ ನುಸ್ಬಾ(58) ಸಾವನ್ನಪ್ಪಿದ ವೃದ್ಧೆ ಎಂದು ಗುರುತಿಸಲಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮುಂಜಾನೆ 4 ಗಂಟೆಯ ಹೊತ್ತಿಗೆ ಬೆಂಕಿ ಕಾಣಿಸಿಕೊಂಡಿದ್ದು, ಐವರು ಮಕ್ಕಳ ಸಹಿತ ಎಂಟು ಮಂದಿ ಅಪಾಯದಿಂದ ಪಾರಾಗಿದ್ದಾರೆ.ಅನಾರೋಗ್ಯದಿಂದಾಗಿ ಬೆಡ್ ರೂಮ್ ನಲ್ಲೇ ಇದ್ದ ವೃದ್ಧ ಮಹಿಳೆ ದಟ್ಟ ಹೊಗೆಯಿಂದಾಗಿ ತಕ್ಷಣ ಹೊರಬರಲಾಗದೇ ಉಸಿರುಗಟ್ಟಿ ಚಿಂತಾಜನಕ ಸ್ಥಿತಿಯಲ್ಲಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.


