Visitors have accessed this post 391 times.
ನವದೆಹಲಿ: ಹೆಚ್ಚುತ್ತಿರುವ ಡಿಜಿಟಲ್ ವಂಚನೆಯ ದೃಷ್ಟಿಯಿಂದ ಸರ್ಕಾರ ಬಹು ದೊಡ್ಡ ಕ್ರಮ ಕೈಗೊಂಡಿದ್ದು, 70 ಲಕ್ಷ ಮೊಬೈಲ್ ಸಂಖ್ಯೆಗಳನ್ನು ಸ್ಥಗಿತಗೊಳಿಸಿದೆ.
ಅನುಮಾನಾಸ್ಪದ ವಹಿವಾಟಿಗೆ ಸಂಬಂಧಿಸಿ, ಡಿಜಿಟಲ್ ವಂಚನೆಗಳನ್ನು ಪರಿಶೀಲಿಸಲು, ಸೈಬರ್ ಅಪರಾಧ ಅಥವಾ ಹಣಕಾಸು ವಂಚನೆಗಳಲ್ಲಿ ತೊಡಗಿರುವ 70 ಲಕ್ಷ ಮೊಬೈಲ್ ಸಂಖ್ಯೆಗಳನ್ನು ಸರ್ಕಾರ ಕಡಿತಗೊಳಿಸಿದೆ ಎಂದು ಹಣಕಾಸು ಸೇವೆಗಳ ಕಾರ್ಯದರ್ಶಿ ವಿವೇಕ್ ಜೋಶಿ ಮಂಗಳವಾರ ಹೇಳಿದ್ದಾರೆ.
ಡಿಜಿಟಲ್ ಪಾವತಿ ಮತ್ತು ಸಂಬಂಧಿತ ಸಮಸ್ಯೆಗಳಿಗೆ ಸಂಬಂಧಿಸಿದಂತೆ ವಂಚನೆಯ ಸಭೆಯ ನಂತರ ಹಣಕಾಸು ಸೇವೆಗಳ ಕಾರ್ಯದರ್ಶಿ ವಿವೇಕ್ ಜೋಶಿ ಈ ಮಾಹಿತಿಯನ್ನು ನೀಡಿದ್ದಾರೆ.
ಅಂತರ್ಜಾಲ ಯುಗದಲ್ಲಿ ಡಿಜಿಟಲ್ ಪಾವತಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ವಂಚನೆಗಳನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಆಧಾರ್ ಎನೇಬಲ್ಡ್ ಪೇಮೆಂಟ್ ಸಿಸ್ಟಮ್ (ಎಇಪಿಎಸ್) ವಂಚನೆಗೆ ಸಂಬಂಧಿಸಿದಂತೆ, ರಾಜ್ಯಗಳು ಗಮನ ಹರಿಸಬೇಕಾಗಿದೆ ಇದರೊಂದಿಗೆ ರಾಜ್ಯ ಸರ್ಕಾರಗಳು ಡೇಟಾ ಭದ್ರತೆಯನ್ನು ಬಲಪಡಿಸುವತ್ತ ಗಮನಹರಿಸಬೇಕು ಎಂದು ಇದೇ ವೇಳೆ ಹೇಳಿದ್ದಾರೆ.