November 9, 2025
WhatsApp Image 2023-11-29 at 6.17.56 PM

ಮಂಗಳೂರು : ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐ ಎ ಅಧಿಕಾರಿಗಳು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.

ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಕುರಿತು ಎನ್ ಐ ಎ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಕದ್ರಿ ಮಂಜುನಾಥ ದೇವಾಲಯವನ್ನು ಸ್ಪೋಟಿಸಲು ಸಂಚು, ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಪೋಟ ಸೇರಿದಂತೆ ಸಮಾಜದಲ್ಲಿ ಶಾಂತಿ ಭಂಗಕ್ಕೆ ಉಗ್ರರು ಯತ್ನಿಸಿದ್ದರು.

ಈ ಎಲ್ಲಾ ಅಂಶಗಳು ಸೇರಿದಂತೆ ಹಲವು ವಿಚಾರಗಳನ್ನು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ.

ಮಂಗಳೂರಿನಲ್ಲಿ 2022ರ ನ.19ರಂದು ಸಂಭವಿಸಿದ್ದ ‘ಕುಕ್ಕರ್ ಬಾ೦ಬ್’ ಸ್ಫೋಟ ಪ್ರಕರಣದ ‘ಮಾಸ್ತರ್ ಮೈಂಡ್” ಬೆಳಗಾವಿ ಜೈಲಿನಲ್ಲಿ ಬಂಧಿತನಾಗಿದ್ದ ಲಷ್ಕರ್ ಎ ತೊಯ್ದಾ ಸಂಘ ಸದಸ್ಯ ಎಂಬ ಸಂಗತಿಯನ್ನು ಎನ್ ಐ ಎ ತನಿಖಾಧಿಕಾರಿಗಳು ಪತ್ತೆ ಮಾಡಿದ್ದರು. 2012ರಲ್ಲಿ ಜಮ್ಮು-ಕಾಶ್ಮೀರದಲ್ಲಿ ಉಗ್ರರ ನೇಮಕಾತಿ ಪ್ರಕರಣದಲ್ಲಿ ಅಪರಾಧಿಯಾಗಿರುವ ಪಾಷಾ, ಕುಕ್ಕರ್ ಬಾಂಬ್ ಸ್ಫೋಟಿಸಿದ್ದನು. ಮಂಗಳೂರಿನ ಕಂಕನವಾಡಿ ಬಳಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಆಟೋ ಚಾಲಕ ಹಾಗೂ ಶಂಕಿತ ಉಗ್ರ ಶಾರಿಕ್ ಗಂಭೀರವಾಗಿ ಗಾಯಗೊಂಡಿದ್ದರು..ಶಂಕಿತ ಉಗ್ರ ಮಂಗಳೂರಿನಲ್ಲಿ ದೊಡ್ಡಮಟ್ಟದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದನು, ರಾಷ್ಟ್ರದ ಭದ್ರತೆಗೆ ಧಕ್ಕೆ ತರುವ ಪ್ರಕರಣ ಇದಾಗಿರುವುದರಿಂದ ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ ಎನ್ ಐ ಎ ಅಧಿಕಾರಿಗಳು ಎಫ್‌ಐಆರ್ ದಾಖಲಿಸಿದ್ದರು.

About The Author

Leave a Reply