44ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ..!

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಒಟ್ಟು 44ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿದೆ ಎಂದು ತಿಳಿದುಬಂದಿದೆ.

ಆರಂಭದಲ್ಲಿ 15 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಹಕಲಾಗಿದೆ ಎಂದು ತಿಳಿದುಬಂದಿತ್ತು. ಆದರೆ ಇತ್ತೀಚಿನ ಮಾಹಿತಿ ಪ್ರಕಾರ ಬೆಂಗಳೂರಿನ 44ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ.

 

ಬಾಂಬ್ ಬೆದರಿಕೆಯಿಂದಾಗಿ ಶಾಲಾ ಮಕ್ಕಳು, ಪೋಷಕರು, ಶಿಕ್ಷಕರು ಆತಂಕಕ್ಕೀಡಾಗಿದ್ದು, ಬೆದರಿಕೆ ಕರೆ ಬಂದ ಎಲ್ಲಾ ಶಾಲಾ ಮಕ್ಕಳನ್ನು ವಾಪಾಸ್ ಮನೆಗೆ ಕಳೆಹಿಸಲಾಗುತ್ತಿದೆ.

ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಪೊಲಿಸರು ಇದು ಹುಸಿ ಬಾಂಬ್ ಬೆದರಿಕೆ ಎಂದು ತಿಳಿಸಿದ್ದಾರೆ. ಆದರೆ ಪ್ರಕರಣ ಗಂಭೀರವಾಗಿ ಪರಿಗಣಿಸಲಾಗಿದ್ದು, ಎರಡು ಪ್ರತ್ಯೇಕ ಸಿಸಿಬಿ ತಂಡ ರಚಿಸಿ ತನಿಖೆ ನಡೆಸಲಾಗಿದೆ.

ಮುಜಾಹಿದ್ದೀನ್ ಹೆಸರಲ್ಲಿ ಬಾಂಬ್ ಬೆದರಿಕೆ ಮೇಲ್ ಬಂದಿದ್ದು, ‘ಎಲ್ಲರೂ ಇಸ್ಲಾಂಗೆ ಮತಾಂತರಗೊಳ್ಳಲು ತಯಾರಾಗಿ, ಇಲ್ಲ ಸಾಯಲು ಸಿದ್ಧರಾಗಿ. ನಿಮ್ಮನ್ನು ಹಾಗೂ ನಿಮ ಮಕ್ಕಳನ್ನು ಸಾಯಿಸುತ್ತೇವೆ. ನೀವೆಲ್ಲರೂ ಅಲ್ಲಾಹು ವಿರೋಧಿಗಳು. ಸಾಯಲು ಸಿದ್ಧರಾಗಿ’ ಎಂದು ಬೆದರಿಕೆ ಹಾಕಲಾಗಿದೆ.

Leave a Reply