ರಾಷ್ಟ್ರೀಯ ಹೆದ್ದಾರಿಯಲ್ಲಿ ಅನುಮಾನಸ್ಪದವಾಗಿ ವೈದ್ಯನ ಶವ ಪತ್ತೆ

ಕೊಡಗು : ಜಿಲ್ಲೆಯ ಕುಶಾಲನಗರದ ಆನೆಕಾಡೆಂಬ ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ನಿಂತಿದ್ದ ಕಾರಲ್ಲಿ ಅನುಮಾನಸ್ಪದವಾಗಿ ವೈದ್ಯನ ಶವ ಪತ್ತೆಯಾಗಿದೆ.

ಮೃತ ವೈದ್ಯನನ್ನು ಮಂಡ್ಯ ತಾಲೂಕಿನ ಶಿವಳ್ಳಿ ನಿವಾಸಿಯಾಗಿರುವ ವೈದ್ಯ ಡಾ. ಸತೀಶ್ ಎಂದು ಹೇಳಲಾಗುತ್ತಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದಲ್ಲಿ ಸತೀಶ್ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು ಎಂದು ತಿಳಿದುಬಂದಿದೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಹುಣಸೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ವೈದ್ಯ ಅನುಮಾನಾಸ್ಪದ ಸಾವಿನ ಬಗ್ಗೆ ಪೊಲೀಸರು ಇದೀಗ ತನಿಖೆ ನಡೆಸುತ್ತಿದ್ದಾರೆ.ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply