
ಮಂಗಳೂರು : ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 35,11,650 ಲಕ್ಷ ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಸೀಝ್ ಮಾಡಿದ್ದಾರೆ. ಏರ್ ಇಂಡಿಯಾ ಎಕ್ಸ್‌ಪ್ರೆಸ್ ಫ್ಲೈಟ್ ನಲ್ಲಿ ದುಬೈನಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದಾನೆ. ಆತನನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ಮಾಡಿದಾಗ ಗುದನಾಳದಲ್ಲಿ ಬಚ್ಚಿಟ್ಟು ಚಿನ್ನ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. ಪ್ರಯಾಣಿಕನ ಗುದನಾಳದಲ್ಲಿ ಪೇಸ್ಟ್ ರೂಪದಲ್ಲಿದ್ದ 3 ಅಂಡಾಕಾರದ ಆಕಾರದೊಳಗೆ 571 ಗ್ರಾಂ ಚಿನ್ನ ಪತ್ತೆಯಾಗಿದೆ. ಈತನಿಂದ 35,11,650 ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.


