Visitors have accessed this post 571 times.
ಪುತ್ತೂರು: ಕಬಕ ಸಮೀಪದ ಕೂವೆತ್ತಿಲ್ಲ ಎಂಬಲ್ಲಿ ಬಸ್ ಹಾಗೂ ಇಂಡಿಕಾ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಶನಿವಾರ ಮಧ್ಯಾಹ್ನ ಘಟನೆ ನಡೆದಿದ್ದು, ಕಾರಿನ ಡೋರ್ ಮುರಿದು ಗಾಯಾಳುಗಳನ್ನು ರಕ್ಷಿಸಲಾಯಿತು. ಬಳಿಕ ಆಸ್ಪತ್ರೆಗೆ ಸಾಗಿಸಲಾಯಿತು. ಇಂಡಿಕಾ ಕಾರು ಹಾಗೂ ಕೆ.ಎಸ್.ಆರ್.ಟಿ.ಸಿ. ಬಸ್ ನಡುವೆ ಢಿಕ್ಕಿ ಸಂಭವಿಸಿದ್ದು, ಕಾರಿನಲ್ಲಿದ್ದವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ.