
ಬೆಂಗಳೂರು : ಡಿಸೆಂಬರ್ 3 ರ ಇಂದು ಹೊಸ ರೇಷನ್ ಕಾರ್ಡ್ ಗೆ ಒಂದು ದಿನದ ಅವಕಾಶ ನೀಡಲಾಗಿದೆ ಎಂಬುದು ವದಂತಿಯಾಗಿದೆ ಎಂದು ಆಹಾರ ಇಲಾಖೆ ಸ್ಪಷ್ಟನೆ ನೀಡಿದೆ.



ಸಾಮಾಜಿಕ ಜಾಲತಾಣಗಳಲ್ಲಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಕರೆಯಲಾಗಿದೆ, ಡಿಸೆಂಬರ್ 3ರ ಇಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ನೀಡಲಾಗಿದೆ ಎಂಬುದು ವದಂತಿಯಾಗಿದೆ ಎಂದು ಆಹಾರ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಅಧಿಕಾರಿಗಳು ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಸಂಬಂಧ ಯಾವುದೇ ರೀತಿಯ ಅಧಿಸೂಚನೆ ಹೊರಡಿಸಿಲ್ಲ, ಪತ್ರಿಕಾ ಪ್ರಕಟಣೆ ಹೊರಡಿಸಿಲ್ಲ, ಹೊಸದಾಗಿ ಅರ್ಜಿ ಕರೆಯುವುದಿದ್ದರೂ, ತಿದ್ದುಪಡಿ ಮಾಡಿಸುವುದಿದ್ದರೂ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುತ್ತದೆ. ಈಗಂತೂ ಯಾವುದೇ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿಲ್ಲ ಎಂದು ಸ್ಪಷ್ಟನೆ ನೀಡಲಾಗಿದೆ.