ಮಂಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಪ್ರಬಲ ಅಭ್ಯರ್ಥಿಗಾಗಿ ಕಾಂಗ್ರೇಸ್ ಸರ್ವೆ ಕಾರ್ಯ ಆರಂಭಿಸಿದ್ದು, ಕಾಂಗ್ರೇಸ್ ಮುಖಂಡರ ಅಭಿಪ್ರಾಯ ಸಂಗ್ರಹಿಸರು ಸಚಿವ ಮಧುಬಂಗಾರಪ್ಪ ಮಂಗಳೂರಿಗೆ ಆಗಮಿಸಿ ಸಭೆಗಳನ್ನು ನಡೆಸಿದ್ದಾರೆ.
ಅಭಿಪ್ರಾಯ ಸಂಗ್ರಹಣೆಗಾಗಿ ಬಂದ ಮಧು ಬಂಗಾರಪ್ಪ ಮುಂದೆ ಮಂಗಳೂರಿನಲ್ಲಿ ಮಾಜಿ ಸಚಿವ ಬಿ ರಮಾನಾಥ ರೈ ಅವರ ಹೆಸರನ್ನು ಎಂಟು ಬ್ಲಾಕ್ ಗಳ ಪ್ರಮುಖರು ಸೂಚಿಸಿದ್ದಾರೆ ಎಂಬ ವಿಚಾರ ಕಾಂಗ್ರೆಸ್ ವಲಯದಿಂದ ಕೇಳಿ ಬಂದಿದೆ. ಇನ್ನುಳಿದಂತೆ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮತ್ತು ಉದ್ಯಮಿ ಇನಾಯತ್ ಆಲಿ ಪರ ಕಾಂಗ್ರೆಸ್ ಮುಂಚೂಣಿ ಘಟಕದ ನಾಯಕರಿಂದ ಹೆಸರು ಪ್ರಸ್ತಾಪವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಶನಿವಾರ ಸಂಜೆ 7 ಗಂಟೆಯಿಂದ ಸುಮಾರು ಮಧ್ಯ ರಾತ್ರಿ 12 ಗಂಟೆವರೆಗೂ ಮಧು ಬಂಗಾರಪ್ಪ ಅವರು ಅಭಿಪ್ರಾಯ ಸಂಗ್ರಹಣೆ ಮಾಡಿದ್ದಾರೆ ಎಂದು ಹೇಳಲಾಗಿದೆ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ನ ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರಗಳಲ್ಲಿ ವಿವಿಧ ಬ್ಲಾಕ್ ಗಳ ಮುಂಚೂಣಿ ನಾಯಕರಗಳಿಂದ ಗೌಪ್ಯವಾಗಿ ಅಭಿಪ್ರಾಯ ಸಂಗ್ರಹ ಮಾಡಲಾಗಿದೆ.