November 8, 2025
WhatsApp Image 2023-12-04 at 9.27.58 AM

ಪುತ್ತೂರು: ಅರಿಯಡ್ಕ ಗ್ರಾಮ ಪಂಚಾಯತ್ ಸದಸ್ಯರೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಮಾಡನ್ನೂರು ಗ್ರಾಮದ ಕಾವು ಬಂಗ್ಲೆಗುಡ್ಡೆ ನಿವಾಸಿ, ಅರಿಯಡ್ಕ ಗ್ರಾಮ ಪಂಚಾಯತಿನ ಕಾಂಗ್ರೆಸ್ ಬೆಂಬಲಿತ ಸದಸ್ಯ ಶಂಕರ ಮಾಡನ್ನೂರು ಆತ್ಮಹತ್ಯೆ ಮಾಡಿಕೊಂಡವರು. ಬಂಗ್ಲೆಗುಡ್ಡೆ ಮನೆಯ ಶಂಕರ ಅವರು ಸುಮಾರು 5 ವರ್ಷಗಳ ಹಿಂದೆ ದೋಳಂತೋಡಿ ಎಂಬಲ್ಲಿ ಜಾಗ ಖರೀದಿ ಮಾಡಿ ಸೊಸೈಟಿ ಮತ್ತು ಇತರ ಸಂಘಗಳಲ್ಲಿ ಸಾಲ ಮಾಡಿದ್ದರು. ಇತ್ತೀಚೆಗೆ ಸಾಲದ ಬಗ್ಗೆ ಹಾಗೂ ಅದನ್ನು ಕಟ್ಟುವ ಬಗ್ಗೆ ಯೋಚನೆ ಮಾಡುತ್ತಿದ್ದು, ಜೀವನದಲ್ಲಿ ಜಿಗುಪ್ಪೆ ಹೊಂದಿದ್ದರು ಎನ್ನಲಾಗಿದೆ. ಮನೆಯವರು ಮಲಗಿದ್ದಾಗ ಮನೆಯ ಒಳಗಡೆಯೇ ಬೈರಸನ್ನೇ ನೇಣಾಗಿ ಬಳಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಡೆತ್ ನೋಟ್ ಸಿಕ್ಕಿದ್ದು ಅದರಲ್ಲಿ, ನನ್ನ ಸಾವಿಗೆ ನಾನೇ ಕಾರಣ. ಕ್ಷಮಿಸು ವನಿತಾ. ಮಕ್ಕಳನ್ನು ನೋಡಿಕೋ ಎಂಬುದಾಗಿ ಬರೆದಿದ್ದರು. ಮೃತರ ಪತ್ನಿ ವನಿತಾ ನೀಡಿದ ದೂರಿನಂತೆ ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Leave a Reply