Visitors have accessed this post 222 times.

“ನಾವು ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ” -ಸಿಎಂ ಸಿದ್ದರಾಮಯ್ಯ

Visitors have accessed this post 222 times.

ಬೆಂಗಳೂರು: ಪ್ರಜಾಪ್ರಭುತ್ವದಲ್ಲಿ ಸೋಲು-ಗೆಲುವುಗಳು ಸ್ವಾಭಾವಿಕ. ಪ್ರತಿಯೊಂದು ಚುನಾವಣಾ ಫಲಿತಾಂಶದಲ್ಲಿ ರಾಜಕೀಯ ಪಕ್ಷಗಳು ಕಲಿಯುವ ಪಾಠ ಇದೆ.ನಾವು ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನಾಲ್ಕು ರಾಜ್ಯಗಳ ಚುನಾವಣೆಗಳ ಪೈಕಿ ತೆಲಂಗಾಣದಲ್ಲಿ ಕಾಂಗ್ರೆಸ್ ಸ್ಪಷ್ಟ ಗೆಲುವು ಸಾಧಿಸಿದೆ.

ಮಧ್ಯಪ್ರದೇಶ, ರಾಜಸ್ತಾನ, ಚತ್ತೀಸ್ ಘಡಗಳಲ್ಲಿ ಹಿನ್ನಡೆ ಆಗಿದೆ.ತೆಲಂಗಾಣ ನಮ್ಮ ನೆರೆಯ ರಾಜ್ಯವಾಗಿರುವ ಕಾರಣ ಅಲ್ಲಿನ ಗೆಲುವಿನಲ್ಲಿ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಯಶಸ್ಸು ಮತ್ತು ಕಾಂಗ್ರೆಸ್ ಪಕ್ಷದ ನಾಯಕರ ಶ್ರಮದ ದೊಡ್ಡ ಪಾತ್ರ ಇದೆ.ವರ್ಷದ ಹಿಂದೆ ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎನ್ನುವುದನ್ನು ಯಾರೂ ನಿರೀಕ್ಷಿಸಿರಲಿಲ್ಲ ಎಂದು ಹೇಳಿದರು.

ರಾಹುಲ್ ಗಾಂಧಿಯವರ ಭಾರತ್ ಜೋಡೋ ಕಾರ್ಯಕ್ರಮ ಅಲ್ಲಿನ ಪಕ್ಷದ ಕಾರ್ಯಕರ್ತರನ್ನು ಇನ್ನಷ್ಟು ಹುರಿದುಂಬಿಸಿದ್ದು ನಿಜ. ಅದರ ನಂತರ ಬಹಳ ವ್ಯವಸ್ಥಿತವಾದ ಪ್ರಚಾರ ನಡೆಯಿತು. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ಮತ್ತು ನುಡಿದಂತೆ ನಡೆದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು ತೆಲಂಗಾಣದ ಮತದಾರರು ಕಾಂಗ್ರೆಸ್ ಪಕ್ಷದ ಮೇಲೆ ಭರವಸೆ ಇಡುವಂತಾಯಿತು ಎಂದರು.

Leave a Reply

Your email address will not be published. Required fields are marked *