Visitors have accessed this post 349 times.
ಶಿವಮೊಗ್ಗ: ನಗರದ ಖಾಸಗಿ ಕಾಲೇಜೊಂದರಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದಂತ ವಿದ್ಯಾರ್ಥಿನಿಯೊಬ್ಬಳು ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ನಡೆದಿದೆ.
ಶಿವಮೊಗ್ಗ ನಗರದ ಆದಿಚುಂಚನಗಿರಿ ಕಾಲೇಜಿನಲ್ಲಿ ಮೇಘಶ್ರೀ(18) ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು.
ಶಿವಮೊಗ್ಗದ ಶರಾವತಿನಗರದಲ್ಲಿದ್ದಂತ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದಂತ ಮೇಘಶ್ರೀ ಇಂದು ಕಾಲೇಜಿನ ಕಟ್ಟಡದ ಮೇಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರೋದಾಗಿ ತಿಳಿದು ಬಂದಿದೆ.
ಮೇಘಶ್ರೀ ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರೋದಾಗಿ ಹೇಳಲಾಗುತ್ತಿದೆ. ಮೇಘಶ್ರೀ ದಾವಣಗೆರೆ ಜಿಲ್ಲೆಯ ಚೆನ್ನಗಿರಿ ತಾಲೂಕಿನ ಚೆನ್ನಾಪುರದ ಗ್ರಾಮದವರು ಎಂಬುದಾಗಿ ತಿಳಿದು ಬಂದಿದೆ. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.