
ಮಂಗಳೂರು: ಮದ್ಯದ ಮತ್ತಿನಲ್ಲಿ ಕಾರು ಚಲಾಯಿಸಿ ಸರಣಿ ಅಪಘಾತ ಸಂಭವಿಸಿರುವ ಘಟನೆ ಜೆಪ್ಪು ಮಾರ್ನಮಿಕಟ್ಟೆಯಲ್ಲಿ ಬುಧವಾರ ರಾತ್ರಿ ನಡೆದಿದೆ. ಸರಣಿ ಅಪಘಾತ ನಡೆಸಿದ ಆರೋಪಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಕಾಸರಗೋಡು ಜಿಲ್ಲೆಯ ಮಂಜೇಶ್ವರ ಕಡಂಬಾರ್ ನಿವಾಸಿ ಅಕ್ಷಯ್ ಸರಣಿ ಅಪಘಾತ ಮಾಡಿರುವ ಆರೋಪಿ. ಈತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅಕ್ಷಯ್ ಮದ್ಯದ ಮತ್ತಿನಲ್ಲಿ ಕೇರಳ ನೋಂದಾಯಿತ ಕಾರು ಚಲಾಯಿಸಿಕೊಂಡು ಬಂದು ಎದುರಿನಿಂದ ಬರುತ್ತಿದ್ದ ಎರಡು ಕಾರು ಹಾಗೂ ಒಂದು ಸ್ಕೂಟರ್ ಗೆ ಢಿಕ್ಕಿ ಹೊಡೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಕದ್ರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಾರು ಚಾಲಕ ಅಕ್ಷಯ್ ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.


