Visitors have accessed this post 1568 times.

‘ಗೃಹಲಕ್ಷ್ಮಿ’ ಹಣ ಬಾರದೇ ಇರಲು ಈ ಸಮಸ್ಯೆಗಳೇ ಕಾರಣ, ಬೇಗ ಸರಿ ಮಾಡ್ಕೊಳ್ಳಿ

Visitors have accessed this post 1568 times.

 ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ‘ಗೃಹಲಕ್ಷ್ಮಿ’ ಯೋಜನೆಯಡಿ ಪಡಿತರ ಚೀಟಿ ಹೊಂದಿದ ‘ಕುಟುಂಬದ ಯಜಮಾನಿ’ ಎಂದು ಗುರುತಿಸಲ್ಪಟ್ಟ ಮಹಿಳೆಯರಿಗೆ ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆಗೆ ಆಗಸ್ಟ್ – 2023 ರಿಂದ ಯಜಮಾನಿ ರೂ.2000/- ಗಳನ್ನು ಡಿಬಿಟಿ ಮೂಲಕ ಹಣ ಜಮೆ ಮಾಡಲಾಗುತ್ತಿದೆ.

 

ಇದುವರೆಗೆ ಯಾರಿಗೆ ಹಣ ಬಂದಿಲ್ಲವೋ ಅವರು ತಪ್ಪದೇ ಈ ಕೆಲಸಗಳನ್ನು ಮಾಡಬೇಕು. ಎಲ್ಲವೂ ಸರಿಯಾಗಿದ್ದು, ಹಣ ಬಾರದೇ ಇದ್ದರೆ ಆಗ ನೀವು ದೂರು ಕೊಡಬಹುದು.

* ನಿಮ್ಮ ರೇಷನ್ ಕಾರ್ಡ್ ಗೆ KYC ಅಪ್ಡೇಟ್ ಆಗಿದೆಯೇ ಎನ್ನುವುದನ್ನು ತಿಳಿದುಕೊಳ್ಳಿ. ಆಗದೇ ಇದ್ದಲ್ಲಿ ಕೂಡಲೇ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಹೋಗುವ ಮೂಲಕ KYC ಅಪ್ಡೇಟ್ ಮಾಡಿಸಿಕೊಳ್ಳಿ.ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿಕೊಂಡಿರುವ ಫಲಾನುಭವಿಗಳಲ್ಲಿ ಯಾರಿಗೆ ಮೊದಲ ಕಂತಿನ ಹಣ ಬಂದಿಲ್ಲ ಅಂತಹವರು ತಮ್ಮ ಬ್ಯಾಂಕ್ಗಳಲ್ಲಿ ಇ-ಕೆವೈಸಿ ಹಾಗೂ ಆಧಾರ್ ಜೋಡಣೆ ಮಾಡಿಕೊಂಡರೆ ಯೋಜನೆ ಹಣ ಜಮಾ ಆಗಲಿದೆ
ಹಣ ಜಮೆಯಾಗದೇ ಇರುವವರು ತಮ್ಮ ಖಾತೆ ಹೊಂದಿರುವ ಬ್ಯಾಂಕ್ಗಳಿಗೆ ಸಂಪರ್ಕಿಸಿ ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಖಾತೆ ವಿವರಗಳನ್ನು ನೀಡಿ ಒಮ್ಮೆ ಚೆಕ್ ಮಾಡಿಕೊಳ್ಳಿ.

* ಗೃಹಲಕ್ಷ್ಮಿ ಯೋಜನೆಯ 2 ಸಾವಿರ ನಿಮ್ಮ ಖಾತೆಗೆ ಜಮಾ ಆದ ತಕ್ಷಣ ಎಸ್‌ಎಂಎಸ್ ಬರುತ್ತದೆ. ಆದರೆ ಕೆಲವು ತಾಂತ್ರಿಕ ದೋಷಗಳಿಂದ ಈ ಮೆಸೇಜ್ ಬಾರದೇ ಇದ್ದರೆ ನೀವು ಬ್ಯಾಂಕ್ ಗೆ ಹೋಗಿ ಚೆಕ್ ಮಾಡಿಕೊಳ್ಳಬಹುದು.

* ಆಹಾರ ಇಲಾಖೆಯ ವೆಬ್ಸೈಟ್ ನಲ್ಲಿ ನೀವು ನಿಮ್ಮ ಖಾತೆಗೆ ಹಣ ಜಮಾ ಆಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಿಕೊಳ್ಳಬಹುದು. ಅನ್ನಭಾಗ್ಯ ಯೋಜನೆಯ ಹಣ ಜಮಾ ಆಗಿರುವ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಕೂಡ ಬಂದಿರಬಹುದು. ನಿಮ್ಮ ಬ್ಯಾಂಕ್ ಅಕೌಂಟ್ ಸಕ್ರಿಯವಾಗಿದೆಯಾ ಚೆಕ್ ಮಾಡಿಕೊಳ್ಳಿ.

* DBT Karnataka mobile application ಆಯಪ್ ಡೌನ್ ಲೋಡ್ ಮಾಡಿಕೊಂಡು ಆಧಾರ್ ಸಂಖ್ಯೆಯನ್ನು ಎಂಟ್ರಿ ಮಾಡಿ ಲಾಗಿನ್ ಆದ್ರೆ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ ಹಣ ಸಂದಾಯ ಆಗಿರುವ ಬಗ್ಗೆ ಮಾಹಿತಿ ಲಭ್ಯವಾಗುತ್ತದೆ.

Leave a Reply

Your email address will not be published. Required fields are marked *