
ಹಾಡಹಗಲೇ ವಕೀಲರೊಬ್ಬರನ್ನು ದುಷ್ಕರ್ಮಿಗಳು ಬರ್ಬ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರ್ಗಿ ನಗರದ ಸಾಯಿಮಂದಿರದ ಬಳಿ ನಡೆದಿದೆ.



ಈರಣ್ಣ ಪಾಟೀಲ್ (40) ಕೊಲೆಯಾದ ದುರ್ದೈವಿ. ತಲೆ ಮೇಲೆ ಕಲ್ಲು ಎತ್ತಿಹಾಕಿ ಈರಣ್ಣ ಪಾಟೀಲ್ ಅವರನ್ನು ಬರ್ಬರವಾಗಿ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ.
ಜಮೀನು ವಿವಾದ ಹಿನ್ನೆಲೆಯಲ್ಲಿ ಸಂಬಂಧಿಕರೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ವಿವಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.