Visitors have accessed this post 1064 times.
ಹೈದರಾಬಾದ್: ಮನೆಯಲ್ಲಿ ಕುಸಿದು ಬಿದ್ದ ತೆಲಂಗಾಣ ಮಾಜಿ ಸಿಎಂ ಕೆ. ಚಂದ್ರಶೇಖರ ರಾವ್ ಅವರನ್ನು ಆಸ್ಪತ್ರೆಗೆ ದಾಖಲಿಸಾಗಿದೆ. ಅವರ ಸೊಂಟದ ಮೂಳೆ ಮುರಿದಿದೆ ಎಂಬ ಮಾಹಿತಿ ಇದೆ. ಸದ್ಯ ಸೋಮಾಜಿಗುಡದ ಯಶೋಧಾ ಖಾಸಗಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಸುದ್ದಿ ತಿಳಿದ ತಕ್ಷಣ ಕುಟುಂಬಸ್ಥರು ಹಾಗೂ ಅಭಿಮಾನಿಗಳು ಆಸ್ಪತ್ರೆ ಆವರಣದಲ್ಲಿ ಜಮಾಯಿಸಿದ್ದಾರೆ. ಅಗತ್ಯವಾಗಿ ನೀಡಬೇಕಾದ ಚಿಕಿತ್ಸೆ ಬಗ್ಗೆ ವೈದ್ಯರು ಕೆಸಿಆರ್ ಕುಟುಂಬಸ್ಥರೊಂದಿಗೆ ಮಾತನಾಡಿದ್ದಾರೆ. ಅವರ ಆರೋಗ್ಯದ ಸ್ಥಿತಿಗತಿ ಕುರಿತು ಹೆಲ್ತ್ ವೈದ್ಯರು ಇಂದು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಿದ್ದಾರೆ.