ತನ್ನ ಇಬ್ಬರು ಮಕ್ಕಳನ್ನು ಕೊಂದು ತಾಯಿ ಕೂಡ ಆತ್ಮಹತ್ಯೆಗೆ
ಶರಣಾಗಿರುವ ಹೃದಯವಿದ್ರಾವಕ ಘಟನೆ ಚಿತ್ರದುರ್ಗ ಜಿಲ್ಲೆಯ
ಚಳ್ಳಕೆರೆ ತಾಲೂಕಿನ ಯಾದಲಫಟ್ಟಿ ಗ್ರಾಮದಲ್ಲಿ ನಡೆದಿದೆ. ಐದು
ವರ್ಷದ ಪ್ರಣೀತಾ & ಮಗ ಜ್ಞಾನೇಶ್ವರ ಎಂಬ ಇಬ್ಬರು
ಮಕ್ಕಳನ್ನು ತಾಯಿ ಲತಾ(25) ನೀರಿನ ತೊಟ್ಟಿಯಲ್ಲಿ ಮುಳುಗಿಸಿ
ಉಸಿರುಗಟ್ಟಿಸಿ ಸಾಯಿಸಿದ್ದಾರೆ. ಬಳಿಕ ತಾನು ಕೂಡ ನೇಣು
ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಾವಿಗೆ
ನಿಖರ ಕಾರಣ ಇನ್ನೂ ಬೆಳಕಿಗೆ ಬಂದಿಲ್ಲ. ಚಳ್ಳಕೆರೆ ಪೊಲೀಸರು
ಪ್ರಕರಣ ದಾಖಲಿಸಿಕೊಂಡಿದ್ದಾರೆ.