Visitors have accessed this post 137 times.

ಪುತ್ತೂರು: ಅಡಿಕೆ ಕೊಯ್ಯುವ ವೇಳೆ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

Visitors have accessed this post 137 times.

ಪುತ್ತೂರು: ಅಡಿಕೆ ಕೊಯ್ಯುವ ವೇಳೆ ಮರದಿಂದ ಬಿದ್ದು ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಇಲ್ಲಿನ ಬೆಟ್ಟಂಪಾಡಿಯಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ನಿಡ್ನಳ್ಳಿ ಗ್ರಾಮದ ತಂಬುತ್ತಡ್ಕ ನಿವಾಸಿ ಸಯ್ಯದ್ (45) ಎಂದು ಗುರುತಿಸಲಾಗಿದೆ.

ಬೆಟ್ಟಂಪಾಡಿ ಸಮೀಪದ ಕೃಷಿಕರೋರ್ವರ ಮನೆಗೆ ಸಯ್ಯದ್ ಅಡಿಕೆ ಕೊಯ್ಯಲು ತೆರಳಿದ್ದರು. ಈ ವೇಳೆ ಅಡಿಕೆ ಕೊಯ್ಯುವಾಗ ಕಾಲು ಜಾರಿ ಮರದಿಂದ ಕೆಳಗೆ ಬಿದ್ದ ಇವರನ್ನು, ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ದು ಬಳಿಕ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅಲ್ಲಿ ತಲುಪುವ ವೇಳೆ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

Leave a Reply

Your email address will not be published. Required fields are marked *