November 8, 2025
WhatsApp Image 2023-12-10 at 11.48.19 AM

ಉಳ್ಳಾಲ : ಸೋಮೇಶ್ವರದ ಅಲಿಮಕಲ್ಲು ಬಳಿ ಸಮುದ್ರಕ್ಕಿಳಿದ ನೀರು ಪಾಲಾದ ಇಬ್ಬರು ವಿಧ್ಯಾರ್ಥಿಗಳ ಮೃತದೇಹ ಇಂದು ಬೆಳಿಗ್ಗೆ ಪತ್ತೆಯಾಗಿದೆ. ಮೃತರನ್ನು ಮಂಜೇಶ್ವರದ ಕುಂಜತ್ತೂರು ಅಡ್ಕ ನಿವಾಸಿ ಶೇಖರ ಎಂಬವರ ಪುತ್ರ ಯಶ್ವಿತ್ (18) ಮತ್ತು ಕುಂಜತ್ತೂರು ಮಜಲ್ ನಿವಾಸಿ ಜಯೇಂದ್ರ ಎಂಬವರ ಪುತ್ರ ಯುವರಾಜ್ (18) ಎಂದು ಗುರುತಿಸಲಾಗಿದೆ.

ಸೋಮೇಶ್ವರ ಪರಿಜ್ಞಾನ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳಾದ ಯಶ್ವಿತ್, ಯುವರಾಜ ಸೇರಿದಂತೆ ಒಟ್ಟು ಆರು ಮಂದಿ ವಿದ್ಯಾರ್ಥಿಗಳು ಶನಿವಾರ ಸೋಮೇಶ್ವರ ಶ್ರೀ ಸೊಮನಾಥ ದೇವಸ್ಥಾನಕ್ಕೆ ತೆರಳಿದ್ದರು, ಬಳಿಕ ಅಲ್ಲಿಂದ ಅವರು ಸೋಮೇಶ್ವರ ಅಲಿಮಕಲ್ಲು ಬಳಿ ಸಮುದ್ರಕ್ಕೆ ಇಳಿದಿದ್ದರು. ಈ ಸಂದರ್ಭದಲ್ಲಿ ನಾಲ್ವರು ಸಮುದ್ರ ಬದಿಯಲ್ಲಿ ಕುಳಿತಿದ್ದರೆ, ಯುವರಾಜ್ ಮತ್ತು ಯಶ್ವಿತ್ ಸಮುದ್ರದ ನೀರಿಗಿಳಿದು, ಕಲ್ಲಿನ ಬಳಿ ತೆರಳಿದ್ದರು. ಈ ಸಂದರ್ಭದಲ್ಲಿ ಸಮುದ್ರದ ಅಲೆಯೊಂದಕ್ಕೆ ಯುವರಾಜ್ ಜಾರಿ ಬಿದ್ದು ಸಮುದ್ರ ಪಾಲಾದಾಗ ಯಶ್ವಿತ್ ಆತನನ್ನು ರಕ್ಷಿಸಲು ಹೋಗಿ ಸಮುದ್ರ ಪಾಲಾಗಿದ್ದಾರೆ. ಸಮುದ್ರ ಪಾಲಾದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಅದೇ ಪ್ರದೇಶದಲ್ಲಿ ಇಂದು ಬೆಳಿಗ್ಗೆ ಪತ್ತೆಯಾಗಿದೆ. ನಿನ್ನೆ ಮುಳುಗಡೆಯಾದ ಸಂಜೆಯಿಂದ ಬೆಳಗ್ಗಿನವರೆಗೂ ಸ್ಥಳೀಯ ಈಜುಗಾರರು ನಿರಂತರ ಕಾರ್ಯಾಚರಣೆಯಲ್ಲಿದ್ದರು. ಇಂದು ಬೆಳಿಗ್ಗೆ ಇಬ್ಬರ ಮೃತದೇಹ ಪತ್ತೆಯಾಗಿದೆ.

About The Author

Leave a Reply