
ಮುಸ್ಲಿಂ ಸಮುದಾಯದ ವಿಧ್ಯಾರ್ಥಿಗಳ ಮೇಲೆ ಗುಂಪೊಂದು ತಡೆದು ನಿಲ್ಲಿಸಿ ಹಲ್ಲೆಗೆ ಯತ್ನಿಸಿದ ಘಟನೆ ಉಪ್ಪಿನಂಗಡಿ ಪೋಲೀಸ್ ಠಾಣೆಯ ಬಾಜಾರು ಎಂಬಲ್ಲಿ ನಡೆದಿರುವ ಘಟನೆ.



ವಾರದ ಹಿಂದೆ ಈ ಘಟನೆ ನಡೆದಿದ್ದು, ಇದೀಗ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಇದೀಗ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.
ಮುಸ್ಲಿಂ ಸಮುದಾಯಕ್ಕೆ ಸೇರಿದ ಯುವಕ ಹಾಗೂ ಯುವತಿಯನ್ನು ತಡೆದು ನಿಲ್ಲಿಸಿದ ಗುಂಪೊಂದು ಅವರ ಮೇಲೆ ಹಲ್ಲೆಗೆ ಯತ್ನಿಸಿದೆ ಎಂದು ಆರೋಪಿಸಲಾಗಿದೆ. ಅಲ್ಲದೆ ಘಟನೆಯ ವಿಡಿಯೋ ಮಾಡಿದ್ದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆಗೆ ಸಂಬಂಧಿಸಿದಂತೆ ವಿಧ್ಯಾರ್ಥಿನಿಯ ತಾಯಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ. ಹಲ್ಲೆಗೆ ಯತ್ನಿಸಿದ ಆರೋಪಿಗಳು ಪರಾರಿಯಾಗಿದ್ದು, ಉಪ್ಪಿನಂಗಡಿ ಪೋಲೀಸರು ತನಿಖೆ ಮುಂದುವರೆಸಿದ್ದಾರೆ.