Visitors have accessed this post 445 times.

ಮಂಗಳೂರು : ಮರಳುಗಾರಿಕೆ ಅಡ್ಡೆಗೆ ದಾಳಿ- ಆರೋಪಿಗಳು ಪರಾರಿ, 4 ದೋಣಿ ವಶ

Visitors have accessed this post 445 times.

ಉಳ್ಳಾಲ : ಹರೇಕಳ ಪಾವೂರು ಬಳಿ ಅಕ್ರಮ ಮರಳುಗಾರಿಕೆ ನಡೆಸುತ್ತಿರುವ ಕುರಿತು ಖಚಿತ ಮಾಹಿತಿಯನ್ನು ಆಧರಿಸಿ, ಉಳ್ಳಾಲ ಪೊಲೀಸ್‌ ಠಾಣೆಯ ಇನ್‌ ಸ್ಪೆಕ್ಟರ್‌ ಬಾಲಕೃಷ್ಣ ನೇತೃತ್ವದ ಪೊಲೀಸರ ತಂಡ, ಗಣಿ ಹಾಗೂ ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ಜತೆಗೂಡಿ ಇಂದು ಬೆಳಗ್ಗೆ ದಾಳಿ ನಡೆಸಿ 4 ದೋಣಿಗಳನ್ನು ವಶ ಪಡಿಸಿಕೊಂಡಿದ್ದು, ಆರೋಪಿಗಳು ಪರಾರಿಯಾಗಿದ್ದಾರೆ. ನೇತ್ರಾವತಿ ನದಿಯಿಂದ ನಾಡದೋಣಿಗಳ ಮೂಲಕ ಮರಳು ಸಂಗ್ರಹಿಸಿ ಮಾರಾಟ ಮಾಡಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿತ್ತು.

Leave a Reply

Your email address will not be published. Required fields are marked *