NIA ಅಧಿಕಾರಿಗಳಿಂದ ಅಬ್ಬಾಸ್ ಅಲಿಯ ಬಂಧನ

ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಮಹಾರಾಷ್ಟ್ರ ಕರ್ನಾಟಕ ಸೇರಿದಂತೆ 44 ಕಡೆಗಳಲ್ಲಿ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದರು. ಈ ವೇಳೆ ಬೆಂಗಳೂರಿನ ಅಬ್ಬಾಸ್ ಅಲಿಯನ್ನು ಬಂಧಿಸಿ ವಿಚಾರಣೆ ನಡೆಸಿ ಬಿಟ್ಟು ಕಳುಹಿಸಿದ್ದರು.

ಇದೀಗ NIA ಅಧಿಕಾರಿಗಳು ಮತ್ತೆ ಅಬ್ಬಾಸ್ ಅಲಿಯನ್ನ ವಶಕ್ಕೆ ಪಡೆದು ದಾಖಲೆಗಳನ್ನು ಪರಿಶೀಲ ನಡೆಸಿದ NIA ಅಧಿಕಾರಿಗಳು ಮತ್ತಷ್ಟು ವಿಚಾರಣೆಗಾಗಿ ಮತ್ತೆ ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

 

ಅಲಿ ಅಬ್ಬಾಸ್ ನನ್ನು NIA ತಂಡ ತೀವ್ರ ವಿಚಾರಣೆ ನಡೆಸುತ್ತಿದೆ. ಕಳೆದ ಕೆಲವು ದಿನಗಳ ಹಿಂದೆ ಮಹಾರಾಷ್ಟ್ರ ಐಸಿಸ್ ಸಂಭಂದ 44 ಕಡೆ NIA ಅಧಿಕಾರಿಗಳು ದಾಳಿ ನಡೆಸಿದ್ದರು.ಮಹಾರಾಷ್ಟ್ರ ಮತ್ತು ಕರ್ನಾಟಕ ಸೇರಿದಂತೆ 44 ಸ್ಥಳಗಳಲ್ಲಿ ನಡೆಸಿತ್ತು.

ಆರೋಪಿ ಅಬ್ಬಾಸ್ ಅಲಿ ಮೊದಲು ಮುಂಬೈ ಮಹಾನಗರದಲ್ಲಿ ವಾಸವಿದ್ದ ಎನ್ನಲಾಗಿದೆ.ಬಳಿಕ ತನ್ನ ಪತ್ನಿಯ ಸಲಹೆ ಮೇರೆಗೆ ಬೆಂಗಳೂರಿಗೆ ಶಿಫ್ಟ್ ಆಗಿದ್ದ. ಇದೀಗ ಎಂಐ ಏ ಅಧಿಕಾರಿಗಳು ಮತ್ತೆ ಆತನನ್ನು ಬಂಧಿಸಿ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

Leave a Reply